ಮೈಸೂರು: ಶಾಲಾ ಶೈಕ್ಷಣಿಕ ಪುಸ್ತಕದಲ್ಲಿ ಈ ಬಾರಿ ಯಾವುದೇ ಮುಖ್ಯ ಬದಲಾವಣೆಗಳಿಲ್ಲ. ಕಳೆದ ವರ್ಷವೇ ಶಾಲಾ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ್ದು, ಕೆಲವು ಪದ ಅಥವಾ ವಾಕ್ಯಗಳಷ್ಟೆ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.
ನಗರದ ಕಾಂಗ್ರೆಸ್ ಭವದಲ್ಲಿಂದು (ಮೇ.28) ಸಿದ್ದಿಗೋಷ್ಠಿ ನಡೆಸಿ ಮಾತನಾಡಿ, ಶೇ.95 ರಷ್ಟು ಪರಿಷ್ಕೃತ ಪುಸ್ತಕಗಳು ಈಗಾಗಲೇ ಶಾಲಾ ಮಕ್ಕಳ ಕೈಗೆ ಸೇರಿದ್ದು, ಪರಿಷ್ಕೃತ ಪುಸ್ತಕಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ವಿವರಿಸಿದರು.
ಮಕ್ಕಳು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಶೂ ವಿತರಿಸಲು ಶಾಲಾಭಿವೃದ್ಧಿ ಸಮಿತಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಕೋವಿಡ್ ಬಳಿಕ ಯಾವುದೇ ಮಕ್ಕಳಿಗೆ ಈವರೆಗೆ ಸೈಕಲ್ ವಿತರಿಸಲಾಗಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಜತೆಗೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ವೇತನ ಹೆಚ್ಚಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, 2 ಗ್ರಾಮ ಪಂಚಾಯಿತಿಗಳಿಗೆ ಒಂದಂತೆ ಒಟ್ಟು 3000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು. 600 ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿಯೂ ಸಹಾ ವಿಶೇಷ ಬೇಸಿಗೆ ಶಿಬಿರ ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…