ಮೈಸೂರು

ದೇಶದಲ್ಲಿ ಮೋದಿ ಅಲೆಯೇ ಇಲ್ಲ : ಸಿದ್ದರಾಮಯ್ಯ !

ಮೈಸೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯೇ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಅವಲಂಬಿಸಿರುವುದರಿಂದ ಅವರ ಹೆಸರಿನಲ್ಲಿ ಮತ ಕೇಳುವ ಸ್ಥಿತಿ ಎದುರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಪರವಾದ ಅಲೆಯೇ ಇದೆ. ಎಲ್ಲಾ ಕಡೆ ಉತ್ತಮವಾದ ವಾತಾವರಣ ಇರುವ ಕಾರಣ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದರು.

ಕೊಟ್ಟ ಭರವಸೆಯನ್ನು ಈಡೇರಿಸದೆ ಖಾಲಿ ಚೊಂಬು ಕೊಟ್ಟಿದ್ದರಿಂದಲೇ ಜಾಹೀರಾತು ನೀಡಿದ್ದೇವೆಯೇ ಹೊರತು ರಾಜ್ಯದ ಖಜಾನೆ ಖಾಲಿ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಪ್ರಧಾನಿ ಮೋದಿ ಅಲೆ ಇಲ್ಲದಿದ್ದರೂ ಅಲೆ ಇದೆ ಎನ್ನುವ ಮಾತನ್ನಾಡುತ್ತಿದ್ದಾರೆ. ಖಾಲಿ ಚೊಂಬಿನ ಜಾಹೀರಾತು ನೀಡಿರುವುದು ಸರಿಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿಲ್ಲ.

ಅಭಿವೃದ್ಧಿಗೂ ಹಣ ಮೀಸಲಿಟ್ಟು ಅಭಿವೃದ್ಧಿಮಾಡುತ್ತಿದ್ದೇವೆ. ಹಳ್ಳಿಗಳಲ್ಲಿ ಕೈಗೆ ಚೊಂಬು ಕೊಟ್ಟರು ಅಂತಾರಲ್ಲ ಆ ರೀತಿ ಬಿಜೆಪಿ ಕಥೆಯಾಗಿದೆ ಎಂದು ಟೀಕಿಸಿದರು.

೧೫ ಲಕ್ಷ ರೂ. ಕೊಡುತ್ತೇವೆಂದು ಹೇಳಿದ್ದ ಮೋದಿ ಅವರು ಜಮಾ ಮಾಡಿದ್ರಾ? ೨ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದ್ರು? ರೈತರ ಆದಾಯ ದ್ವಿಗುಣ ಮಾಡ್ತೀವಿ ಅಂದ್ರು? ಹೇಳಿದ್ದನ್ನ ಒಂದೂ ಮಾಡದೆ ಇರುವ ಕಾರಣ ಖಾಲಿ ಚೊಂಬು ಕೊಟ್ಟಿದ್ದಾರೆಂದು ಜಾಹೀರಾತು ಕೊಡಲಾಗಿದೆಯೇ ಹೊರತು ಬೇರೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.

ನಾವು ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆದರೆ, ಬಿಜೆಪಿಯವರು ಏನನ್ನೂ ಮಾಡದೆ ಬರೀ ಮಾತನಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜಕೀಯವಾಗಿ ಬಳಕೆ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಒಂದು ಹೆಣ್ಣಿನ ಕೊಲೆಯ ವಿಚಾರವನ್ನು ಬಳಸಿಕೊಂಡು ರಾಜಕಾರಣಮಾಡುವುದು ದುರ್ದೈವದ ಸಂಗತಿ. ವೈಯಕ್ತಿಕ ಕಾರಣಕ್ಕಾಗಿ ಕೊಲೆ ಆಗಿದೆ. ಈ ಕೊಲೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದರೂ ಬಿಜೆಪಿಯವರು ರಾಜಕೀಯವಾಗಿ ಲಾಭ ಪಡೆಯಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ವಿರೋಧ ಪಕ್ಷದವರು ಪ್ರತಿಭಟನೆ ಮಾಡಲು ನಮ್ಮದೇನೂ ಅಭ್ಯಂತರವಿಲ್ಲ. ಎಲ್ಲರ ಕಾಲದಲ್ಲೂ ಕೊಲೆಗಳು ಆಗಿವೆ. ಹಾಗೆಂದ ಮಾತ್ರಕ್ಕೆ ನಾವು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎನ್ನುವ ಅರ್ಥವಲ್ಲ.

ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ನಮ್ಮ ಸರ್ಕಾರ ಗಂಭೀರವಾಗಿದೆ. ವೈಯಕ್ತಿಕ ವಿಚಾರದಲ್ಲಿ ನಡೆದ ಹತ್ಯೆಗೂ-ಕಾನೂನು ಸುವ್ಯವಸ್ಥೆಗೂ ಸಂಬಂಧವಿಲ್ಲ ಎಂದು ನುಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಎಂದಿಗೂ ಸರ್ವನಾಶವಾಗಲ್ಲ. ಸಿದ್ದರಾಮಯ್ಯ ಅವರೇ ನಾಶದ ಬಗ್ಗೆ ಹೇಳುತ್ತಾರೆಂದು ಹೇಳಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಜಾ.ದಳದವರಿಗೆ ಕಾಂಗ್ರೆಸ್ ಕಂಡರೆ ಭಯ ಹೊರತು ನನಗಲ್ಲ. ಅವರಿಗೆ ಭಯ ಇರುವ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಜತೆ ಮೈತ್ರಿಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ. ಭಯ ಇಲ್ಲದಿದ್ದರೆ ಪ್ರತ್ಯೇಕವಾಗಿ ಸ್ಪರ್ಧಿಸಬಹುದಾಗಿತ್ತು. ನಮಗೆ ಅವರನ್ನು ಕಂಡರೆ ಯಾವುದೇ ಭಯವಿಲ್ಲ. ನಾವು ಸ್ವಂತ ಶಕ್ತಿಯಿಂದ ಚುನಾವಣೆ ಎದುರಿಸಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

1 hour ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

1 hour ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

1 hour ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

2 hours ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

4 hours ago