ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 224 ಶಾಸಕರಿಗೂ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಎಲ್ಲರಿಗೂ ಆಸೆಗಳು ಸಹಜ. ನಮ್ಮ ಪಕ್ಷದಲ್ಲಿ ಒಟ್ಟು 136 ಸ್ಥಾನ ಇದೆ. ಸರ್ಕಾರದಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಇಲ್ಲ. ಸರ್ಕಾರವೂ ಭದ್ರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸರ್ಕಾರದಲ್ಲಿ ಸ್ಥಿರವಾಗಿದ್ದಾರೆ. ಅವರು ತಮ್ಮದೇ ಚಾಕಚಕ್ಯತೆಯಿಂದ ಆಡಳಿತ ನಡೆಸುತ್ತಿದ್ದಾರೆ ಎಂದಿದ್ದಾರೆ.
ನಮ್ಮ ಸರ್ಕಾರ ರಾಜ್ಯಕ್ಕೆ ಉತ್ತಮ ಬಜೆಟ್ ಕೊಟ್ಟು ಒಳ್ಳೆಯ ಆಡಳಿತ ನಡೆಸುತ್ತಿದೆ. ನನಗೆ ಬಡವರಿಗೆ ಅಕ್ಕಿ ಕೊಡುವ ಜವಾಬ್ದಾರಿ ಕೊಟ್ಟಿದ್ದಾರೆ. ಆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಬೇರೆ ಪ್ರಶ್ನೆಗಳನ್ನು ಕೇಳಬೇಡಿ. ನಾನು ಬೇರೆ ರೀತಿಯ ಪ್ರಶ್ನೆಗಳಿಗೆ ಉತ್ತರ ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಸರ್ಕಾರದಿಂದ 5 ಕೆ.ಜಿ ಅಕ್ಕಿ ವಿತರಣೆ ಇನ್ನೂ ಭಾರಿ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ರೈತರಿಂದ ನೇರವಾಗಿ ಅಕ್ಕಿ ಖರೀದಿ ಮಾಡುವುದಿಲ್ಲ. ಆ ರೀತಿ ಖರೀದಿ ಮಾಡುವ ಪ್ರಶ್ನೆಯೇ ಸರ್ಕಾರದ ಮುಂದೆ ಇಲ್ಲ. ರೈಸ್ ಮಿಲ್‌ಗಳಿಂದ ಮಾತ್ರ ನಾವು ಅಕ್ಕಿ ಖರೀದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ. ಸದ್ಯಕ್ಕೆ ಯಾವುದೂ ಅಂತಿಮವಾಗಿಲ್ಲ. ಅಕ್ಕಿ ಸಾಗಾಣಿಕೆ ಸಮಸ್ಯೆ ಸೇರಿದಂತೆ ಹಲವು ರೀತಿಯ ಸವಾಲುಗಳಿವೆ. ಹೀಗಾಗಿ ಯಾವುದು ಅಂತಿಮವಾಗಿಲ್ಲ. ಪ್ರತಿ ತಿಂಗಳು ದೊಡ್ಡ ಪ್ರಮಾಣದ ಅಕ್ಕಿ ಖರೀದಿ ಅದು ಅಷ್ಟು ಸುಲಭದ ಮಾತಲ್ಲ. ಹೀಗಾಗಿ ಅದು ಸಮಯ ತೆಗೆದುಕೊಳ್ಳುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ…
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…