ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಂದ ಮೈಸೂರಿನಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆ ಶೀವಕುಮಾರ್ ಹೇಳುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಭಾಗದ ಶೇ 90 ರಷ್ಟು ಜನರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕಡೆಗೆ ಒಲವು ತೋರಿಸಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಯಾವುದೇ ಸಮುದಾಯದ ಬೆಳವಣಿಗೆಯನ್ನು ಸಹಿಸುವುದಿಲ್ಲ. ತಾವು ಮುಖ್ಯಮಂತ್ರಿಯಾಗಲು ಅಡ್ಡಿಯಾಗಿದ್ದ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? 2016 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಆಗುವ ಅವಕಾಶ ಸಿಕ್ಕಿದಾಗ ಅವರನ್ನು ಕೇಂದ್ರಕ್ಕೆ ಕರೆಸಿಕೊಳ್ಳದಿದ್ದರೇ ಬಿಜೆಪಿ ಸೇರುತ್ತೇನೆ ಎಂದು ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದು ಯಾರು ಎಂದು ಎಚ್‌ಡಿಕೆ ಪ್ರಶ್ನಿಸಿದರು.





