ಮೈಸೂರು

ಮೈಸೂರಲ್ಲಿ ಸಿಎಂ ರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ; ಎಚ್ಡಿಕೆ

ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಂದ ಮೈಸೂರಿನಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆ ಶೀವಕುಮಾರ್‌ ಹೇಳುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಭಾಗದ ಶೇ 90 ರಷ್ಟು ಜನರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಡೆಗೆ ಒಲವು ತೋರಿಸಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಯಾವುದೇ ಸಮುದಾಯದ ಬೆಳವಣಿಗೆಯನ್ನು ಸಹಿಸುವುದಿಲ್ಲ. ತಾವು ಮುಖ್ಯಮಂತ್ರಿಯಾಗಲು ಅಡ್ಡಿಯಾಗಿದ್ದ ಪರಮೇಶ್ವರ್‌ ಅವರನ್ನು ಸೋಲಿಸಿದ್ದು ಯಾರು? 2016 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಸಿಎಂ ಆಗುವ ಅವಕಾಶ ಸಿಕ್ಕಿದಾಗ ಅವರನ್ನು ಕೇಂದ್ರಕ್ಕೆ ಕರೆಸಿಕೊಳ್ಳದಿದ್ದರೇ ಬಿಜೆಪಿ ಸೇರುತ್ತೇನೆ ಎಂದು ಹೈಕಮಾಂಡ್‌ಗೆ ಬೆದರಿಕೆ ಹಾಕಿದ್ದು ಯಾರು ಎಂದು ಎಚ್‌ಡಿಕೆ ಪ್ರಶ್ನಿಸಿದರು.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

37 mins ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

2 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

2 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

3 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

3 hours ago