ಮೈಸೂರು

ಮೈಸೂರಿನ ಈ ಪ್ರದೇಶಗಳಲ್ಲಿ ಆ.12,13 ರಂದು ವಿದ್ಯುತ್‌ ಇರಲ್ಲ…

ಮೈಸೂರು: ಇದು ಮಳೆಗಾಲ, ಹೀಗಾಗಿ  ವಿದ್ಯುತ್‌ ವ್ಯತ್ಯಯ ಸಮಸ್ಯೆ ಕಾಮನ್.‌ ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್‌ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್‌ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಚೆಸ್ಕಾಂ ನಗರದ ಹಲವೆಡೆ ವಿದ್ಯುತ್‌ ಕಡಿತ ಮಾಡಿದೆ.

ಆಗಸ್ಟ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಅಗ್ರಹಾರ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಶಂಕರ ಮಠ, ಉತ್ತರಾಧಿಮಠ, ಅಗ್ರಹಾರ, ರಾಮಾನುಜ ರಸ್ತೆ 1ನೇ ಕ್ರಾಸ್‌ನಿಂದ 4ನೇ ಕ್ರಾಸ್ ವರೆಗೆ, ಸುಣ್ಣದಕೇರಿ, ತ್ಯಾಗರಾಜ ರಸ್ತೆ, ಹೊಸಕೇರಿ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮುಂದುವರೆದು, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ದೂರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮುರುಡಗಳ್ಳಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ತಳೂರು ಗ್ರಾಮ, ದೂರ ಗ್ರಾಮ, ದೊಡ್ಡಕಾಟೂರು ಗ್ರಾಮ, ಮುರುಡಗಳ್ಳಿ ಗ್ರಾಮ, ಹಳ್ಳಿಕೆರೆ ಹುಂಡಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಇಲ್ಲೂ ವಿದ್ಯುತ್‌ ಇರಲ್ಲ….

ಆಗಸ್ಟ್ 12 ರಂದು ಬಿಳಿಕೆರೆ ಉಪವಿಭಾಗದ ಗದ್ದಿಗೆ ಶಾಖಾ ವ್ಯಾಪ್ತಿಯ ಜಿ.ವಿ.ಗುಡಿ ವಿದ್ಯುತ್ ವಿತರಣಾ ಕೇಂದ್ರದಿoದ ಹೆಚ್.ಡಿ.ಕೋಟೆ ಉಪವಿಭಾಗದ ಆಲನಹಳ್ಳಿ ಶಾಖಾ ವ್ಯಾಪ್ತಿಯ ಕ್ಯಾತನಹಳ್ಳಿ ಫೀಡರ್‌ಗೆ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ, ಬೆಳಿಗ್ಗೆ 10 ಗಂಟೆಯಿoದ ಸಂಜೆ 6 ಗಂಟೆಯವರೆಗೆ   ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ ಹಸ್ಬಾಳು, ಜಿ.ವಿ.ಗುಡಿ, ಫಾರಂ ಗೇಟ್, ದೈತನಕೆರೆ ಕಾವಲ್, ಮಾರನಹಳ್ಳಿ ಮತ್ತು ಪೆರಿಯಾರ್ ಗ್ರಾಮಗಳಲ್ಲಿ   ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅಷ್ಟೆ ಅಲ್ಲದೇ, ಆಗಸ್ಟ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಏಗಿ ದೇವನೂರು ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ 11 ಕೆ.ವಿ. ಕಾವೇರಿ ಫೀಡರ್‌ನಲ್ಲಿ ಮುಖ್ಯ ಪ್ರದೇಶಗಳಾದ…. ಕಾವೇರಿ ಆಸ್ಪತ್ರೆ, ಯರಗನಹಳ್ಳಿ, ವಿದ್ಯಾನಗರ, ರಾಘವೇಂದ್ರ ಬಡಾವಣೆ, ಟೆರಿಷೀಯನ್ ಕಾಲೇಜು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದ್ದು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…

17 mins ago

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ತಮಿಳು ನಟ ವಿಜಯ್‌ ಆಕ್ರೋಶ

ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಕುರಿತು ತಮಿಳು…

42 mins ago

ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ…

1 hour ago

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸಕ್ಕರೆ ನಾಡು ಮಂಡ್ಯ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ…

1 hour ago

ಓದುಗರ ಪತ್ರ: ಆ..ಹಾರ!

ಯಾವುದಾದರೂ ಕವನ ವಾಚಿಸಿ, ಏನಾದರೂ ಆಹಾರ ತಿನ್ನಿ ಎಂದವಳು ಹೇಳಿದಳು ಕವಿರಾಯರಿಗೆ ಕಿವಿಮಾತು! ಸಮ್ಮೇಳನದಿಂದ ಬರುವಾಗ ಆ..ಹಾರ, ಶಾಲು, ಸ್ಮರಣಿಕೆಗಳ…

2 hours ago

ಓದುಗರ ಪತ್ರ: ಕನ್ನಡದಲ್ಲಿ ತೀರ್ಪು ನೀಡಿರುವುದು ಸ್ವಾಗತಾರ್ಹ

ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ…

3 hours ago