ಮೈಸೂರು

ಅವರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿಗಳು : ಉರಿಗೌಡ,ನಂಜೇಗೌಡ ಚರ್ಚೆ ತಡೆದ ಚುಂಚಶ್ರೀಗಳ ಮೇಲೆ ಅಡ್ಡಂಡ ಕಿಡಿ

ಮೈಸೂರು : ಉರಿಗೌಡ,ನಂಜೇಗೌಡ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂಬ ಆದಿಚುಂಚನಗಿರಿ ಸಂಸ್ಥಾನ ಮಠದ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆಗೆ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ.ಆದರೆ ಉರಿಗೌಡ,ನಂಜೇಗೌಡ ಬಗ್ಗೆ ಚರ್ಚೆ ನಡೆಯದಂತೆ ಮಾಡಿದ್ದು ಸರಿಯಲ್ಲ ಈ ಬಗ್ಗೆ ಸಂಶೋಧನೆ ನಡೆಯಲಿ ಎನ್ನಬೇಕಿತ್ತು” ಎಂದು ಕಾರ್ಯಪ್ಪ ಹೇಳಿದ್ದಾರೆ.
“ಅವರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ. ಬೇರೆ ಜಾತಿಗಳಿಗೆ ಅಲ್ಲ.ಒಕ್ಕಲಿಗ ಸಮುದಾಯ ರಕ್ಷಣೆ ಮಾಡುವುದು ಅವರ ಕೆಲಸ.ಹಾಗಂತ ಉರಿಗೌಡ,ನಂಜೇಗೌಡ ಕುರಿತು ಚರ್ಚೆ ನಡೆಯಲೇ ಬಾರದು ಅಂತಾ ಹೇಳಿದ್ದು ಸರಿಯಲ್ಲ”ಎಂದಿದ್ದಾರೆ.
“ಸ್ವಾಮೀಜಿಗಳು ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರ ಬೆನ್ನಿಗೆ ನಿಂತರು.ಆಗಾಗ ಡಿಕೆಶಿ ಅವರನ್ನ ಕರೆದು ಕುಮಾರಸ್ವಾಮಿ ನಮ್ಮವ,ಅವರ ಸರ್ಕಾರ ಬೀಳದಂತೆ ನೋಡಿಕೊ ಎಂದು ಹೇಳಿದ್ದರು”ಎಂದು ಗಂಭೀರ ಆರೋಪ ಮಾಡಿರುವ ಅವರು,ಅವರಿಗೆ ಕುಮಾರಸ್ವಾಮಿ,ಡಿಕೆಶಿ ಮಾತ್ರ ಒಕ್ಕಲಿಗ ನಾಯಕರು,ಸಿ.ಟಿ.ರವಿ,ಅಶ್ವತ್‌ ನಾರಾಯಣ್‌ ಅವರೆಲ್ಲ ಅದೇ ಸಮುದಾಯದವರಾದರೂ ಸ್ವಾಮೀಜಿಗೆ ಬೇಕಿಲ್ಲ ಎಂದಿದ್ದಾರೆ.
ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿವಾದದ ಬಗ್ಗೆ ಚರ್ಚೆ ಮಾಡಬಾರದು,ಎಂದು ಹೇಳಿದ ಬಳಿಕವೂ ಸಿ.ಟಿ ರವಿ ಹಾಗೂ ಇನ್ನಿತರೆ ನಾಯಕರು ಮಾತನಾಡುತ್ತಲೇ ಇದ್ದಾರೆ.ಅದರ ಮುಂದುವರಿದ ಭಾಗವಾಗಿ ಈಗ ಅಡ್ಡಂಡ ಕಾರ್ಯಪ್ಪ ಮಾತನಾಡಿದ್ದಾರೆ.
ನಿರ್ಮಲಾನಂದನಾಥ ಸ್ವಾಮೀಜಿ ಏನು ಹೇಳಿದ್ದರು..?
ಇತೀಚೆಗೆ ಉರಿಗೌಡ ನಂಜೇಗೌಡ ವಿವಾದ ತೀವ್ರ ಸ್ವರೂಪ ಪಡೆದಾಗ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಯಾರೂ ಕೂಡ ಈ ಬಗ್ಗೆ ಹೆಚ್ಚು ಚರ್ಚೆ ಮಾಡಬಾರದು ಎಂದು ಹೇಳಿದ್ದರು.
ಸಿ.ಟಿ.ರವಿ ಇರಲಿ ಅಶ್ವಥ್‌ ನಾರಾಯಣ್‌,ಗೋಪಾಲಯ್ಯ ಯಾರೇ ಇರಲಿ ಯಾರೆಲ್ಲ ಈ ವಿಷಯದಲ್ಲಿ ಮಅತನಾಡುತ್ತಿದ್ದಾರೋ ವರೆಲ್ಲರೂ ಸುಮ್ಮನಾಗಬೇಕು.
ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ.ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆಯುವುದು ಕಾಂಬರಿ ಆಗುತ್ತದೆ.ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ.ಅಂತಹದ್ಯಾವುದೂ ಇದುವರೆಗೆ ಕಂಡುಬಾರದೇ ಇರುವುದರಿಂದ ಹೇಳಿಕೆಗಳ ಮೂಲಕ ಯವಕರಲ್ಲಿ ಮತ್ತು ಸಮಕಾಲೀನರಲ್ಲಿ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಠಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು,ಸಮುದಾಯಕ್ಕೆ ಧಕ್ಕೆಯನ್ನು ಕೂಡ ತರಬಾರದು.ಇನ್ನು ಮುಂದುವರಿದು,ಯಾವ ವಿಚಾರ ಪ್ರಸ್ತಾಪ ಆಗುತ್ತಿದೆಯೋ ಈ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಉರಿಗೌಡರು ಮತ್ತು ನಂಜೇಗೌಡರ ಬಗೆಗೆ ಇತಿಹಾಸವನ್ನು ಸಾರುವಂತಹ ನಮೂದು ಆಗಿರುವಂತಹ ಅತವಾ ಶಾಸನಗಳು ಸಿಕ್ಕಿದ್ದೇ ಆದರೇ ಶ್ರೀ ಕ್ಷೇತ್ರಕ್ಕೆ ತಂದುಕೊಡಿ ಅದರಲ್ಲಿ ಎಲ್ಲವನ್ನೂ ಕ್ರೂಢಿಕರಿಸಿ,ಯಾಕೆಂದರೆ ಶಾಸನ ತಜ್ಙರು ಇರುತ್ತಾರೆ ಕಾರ್ಬನ್‌ ಡೇಟಿಂಗ್‌ ಟೆಕ್ನಾಲಜಿ ನಮ್ಮಲ್ಲಿದೆ.ಇತಿಹಾಸವನ್ನು ವಿಮರ್ಶೆ ಮಾಡುವ ಐತಿಹಾಸಿಕ ಶ್ರೇಷ್ಠ ವಿಮರ್ಶಕರು ಇದ್ದಾರೆ.ಇವರನ್ನೆಲ್ಲ ಇಟ್ಟುಕೊಂಡು ತಂದುಕೊಟ್ಟ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಒರೆಗೆ ಹಚ್ಚಿ ನಂತರ ಒಂದು ನಿರ್ಧಾರಕ್ಕೆ ಬರಲಾಗುತ್ತದೆ.ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲಕ್ಕೆ ಮತ್ತು ಸಮುದಾಯದ ಬಾವನೆಗಳಿಗೆ ಧಕ್ಕೆ ತರುವಂಥ ಕೆಲಸ ಆಗುತ್ತಿದೆ.ಇದನ್ನು ತಕ್ಷಣ ನಿಲ್ಲಿಸಬೇಕು ಎನ್ನುವುದು ನಮ್ಮ ಆಗ್ರಹ ಎಂದಿದ್ದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

9 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

37 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago