ನಂಜನಗೂಡು: ಬಾರ್‌ನ ಬಾಗಿಲು ಮೀಟಿ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ನಂಜನಗೂಡಿನ ತಗಡೂರು ಗ್ರಾಮದಲ್ಲಿ ನಡೆದಿದೆ.ಕಬ್ಬಿಣದ ರಾಡ್‌ನಿಂದ ಬಾರ್‌ನ ಶೆಲ್ಟರ್ ಮೀಟಿ ಒಳಗೆ ನುಗ್ಗಿದ ಖದೀಮರು, ಬಾರ್‌ನಲ್ಲಿದ್ದ ಹಣವನ್ನು ದೋಚಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಪೆಟ್ಟಿಗೆ ಅಂಗಡಿಯಲ್ಲೂ ಕಳ್ಳತನ ಮಾಡಲು ಯತ್ನಿಸಿದ್ದಾರೆ.
ಪೆಟ್ಟಿಗೆ ಅಂಗಡಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೇಲೆಯೂ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ವ್ಯಕ್ತಿ ಕೂಗಾಡಲು ಆರಂಭಿಸಿದಾಗ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ.
ಬಾರ್‌ನಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.





