ಮೈಸೂರು

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.

ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಜಯಪ್ರಕಾಶ್ ಎಂಬುವವರ ಮನೆಯಲ್ಲಿದ್ದ 180 ಗ್ರಾಂ ಚಿನ್ನ ಕಳುವುವಾಗಿದೆ.

ಮಾರಕಾಸ್ತ್ರಗಳನ್ನು ಹಿಡಿದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದ್ದು, ಕಳ್ಳರ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ: ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಜುಬಿಲಿಯೆಂಟ್ ಬಡಾವಣೆಯಲ್ಲಿ ಬಾಡಿಗೆಗೆ ಇದ್ದ ಜಯಪ್ರಕಾಶ್ ಅವರು, ಸೂರ್ಯೋದಯ ಬಡಾವಣೆಯಲ್ಲಿ ಹೊಸ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು.

ಕಳೆದ ಗುರುವಾರ ನಗದು ಮತ್ತು ಚಿನ್ನಾಭರಣಗಳ ಸಮೇತ ಪೀಠೋಪಕರಣಗಳನ್ನು ಹೊಸಮನೆಗೆ ಶಿಫ್ಟ್ ಮಾಡಿದ್ದರು. ಮರುದಿನ ಆ ಮನೆಯ ವಾಸಕ್ಕೆ ಬರಲು ನಿರ್ಧರಿಸಿ ಹಳೆಯ ಮನೆಯಲ್ಲಿ ಮಲಗಿದ್ದರು.

ಬೆಳಿಗ್ಗೆ ಎದ್ದು ಹೊಸ ಮನೆಗೆ ತೆರಳಿದಾಗ ಬಾಗಿಲ ಬೀಗ ಮುರಿದು ಕಳ್ಳತನವಾಗಿರುವ ದೃಶ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

10 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

16 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

21 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

25 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

29 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

35 mins ago