ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷ, ರಾಜ್ಯ ಮತ್ತು ಜನಸಾಮಾನ್ಯರ ಏಳಿಗೆಗಾಗಿ ಕಳೆದ 45 ವರ್ಷಗಳಿಂದ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ರಾಜಕೀಯ ಜೀವನ ಒಂದು ಅದ್ವಿತೀಯ ಪಯಣ. 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜಕೀಯ ವಲಯದಲ್ಲಿ “ಟ್ರಬಲ್‌ಶೂಟರ್” ಎಂದೇ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು 1980ರಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಮೂಲಕ ರಾಜಕೀಯ ಪ್ರವೇಶಿಸಿದರು. ವಿದ್ಯಾರ್ಥಿ ಜೀವನದಲ್ಲಿಯೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಗಮನ ಸೆಳೆದಿದ್ದ ಅವರು, ಯುವ ನಾಯಕರಾಗಿ ಕಾಂಗ್ರೆಸ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.
ಅವರ ಬಗ್ಗೆ ಕಿರು ಮಾಹಿತಿ ಇಲ್ಲಿದೆ.
ಜೀವನದ ಹಾದಿ ಮತ್ತು ಪ್ರಮುಖ ಘಟ್ಟಗಳು
1980 | ರಾಜಕೀಯ ಪ್ರವೇಶ
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಮೂಲಕ ವಿದ್ಯಾರ್ಥಿ ನಾಯಕರಾಗಿ ರಾಜಕೀಯ ಪ್ರವೇಶವಾಯಿತು. ಪದವಿ ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಂದ ರಾಜಕೀಯ ಬೆಂಬಲವೂ ಸಿಕ್ಕಿತ್ತು.
1985 | ಮೊದಲ ಚುನಾವಣಾ ಸ್ಪರ್ಧೆ
ಸಾತನೂರು ಕ್ಷೇತ್ರದಿಂದ ಹೆಚ್. ಡಿ. ದೇವೇಗೌಡರ ವಿರುದ್ಧ ಸ್ಪರ್ಧೆ
1989 | ಮೊದಲ ಚುನಾವಣಾ ಗೆಲುವು, ಸಾತನೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
1990-1992 | ಸಚಿವರು, ಕಾರಾಗೃಹ ಮತ್ತು ಗೃಹ ರಕ್ಷಕ ಇಲಾಖೆ, ಜೈಲುಗಳಲ್ಲಿ ಪುನರ್ವಸತಿ ಮತ್ತು ಕೌಶಲ್ಯಾಭಿವೃದ್ಧಿ ಸುಧಾರಣೆ
1999-2004 | ಸಚಿವರು, ನಗರಾಭಿವೃದ್ಧಿ ; ನಗರ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
2014-2018 | ಸಚಿವರು, ಇಂಧನ
2018-2019 | ಸಚಿವರು, ಬೃಹತ್ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ
2019 | ಪಕ್ಷ ನಿಷ್ಠೆಯ ಪರೀಕ್ಷೆ
ರಾಜಕೀಯ ಒತ್ತಡಗಳ ನಡುವೆಯೂ ಪಕ್ಷವನ್ನು ಉಳಿಸಲು ಜೈಲು ಶಿಕ್ಷೆಯನ್ನು ಅನುಭವಿಸಿದರು.
2020-ಪ್ರಸ್ತುತ | ಕೆಪಿಸಿಸಿ ಅಧ್ಯಕ್ಷ
ಕರ್ನಾಟಕದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ; ಕಾಂಗ್ರೆಸ್ ಪಕ್ಷದ ಆಂತರಿಕ ಬಿಕ್ಕಟ್ಟುಗಳ ನಿವಾರಣೆ
2023 | ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ
2023-ಪ್ರಸ್ತುತ | ಉಪ ಮುಖ್ಯಮಂತ್ರಿಗಳು,
ಮೂಲಸೌಕರ್ಯಗಳ ಸುಧಾರಣೆ, ನಗರ ಆಧುನೀಕರಣ ಮತ್ತು ದೀರ್ಘಾವಧಿಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಜನಪರ ಆಡಳಿತದೊಂದಿಗೆ ಕರ್ನಾಟಕವನ್ನು ಮುನ್ನಡೆಸುತ್ತಿದ್ದಾರೆ.





