ಮೈಸೂರು : ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ವಿಚಾರವಾಗಿ ಗಲಾಟೆ ನಡೆಯುತ್ತಿದೆ. ರಾಜ್ಯಕ್ಕೆ ಮುಂಗಾರು ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಕುಡಿಯುವ ನೀರಿಗಾಗಿ ಎಲ್ಲಡೆ ಹಾಹಾಕಾರ ಶುರುವಾಗಿದೆ. ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಕೊಡಲು ಸಾಧ್ಯವಾಗಲ್ಲ. ಕಾವೇರಿ ನೀರಾವರಿ ನಿಗಮದವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾವೇರಿ ವ್ಯಾಪ್ತಿಯ 4 ಡ್ಯಾಂಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಇದೆ. ಪ್ರತಿ ವರ್ಷ ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗಲಿದೆ. ಈ ಸಂಬಂಧ ಸರ್ಕಾರ ಸೆಂಟ್ರಲ್ ವಾಟರ್ ಕಮಿಷನ್ಗೆ ಪತ್ರ ಬರೆದಿದೆ. ಕಾವೇರಿ ನೀರು ಬಿಡುವ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಕೇಂದ್ರ ಸರ್ಕಾರ ತಮಿಳುನಾಡಿಗೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯ ಬಿಜೆಪಿ ನಾಯಕರು ಕೂಡ ಕೇಂದ್ರದ ಗಮನಕ್ಕೆ ತರಲಿ. ರಾಜ್ಯದಲ್ಲಿ ಮಳೆಯ ಅಭಾವ ಇದೆ. ಜುಲೈ ತಿಂಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಕುಡಿಯುವ ನೀರಿಗೆ ಸಮಸ್ಯೆಯಾಗುವ ವಾತಾವರಣ ಇದೆ. ಈಗಲೇ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದರು.
ಹಳೇ ಮೈಸೂರು ಭಾಗದ ಕಾವೇರಿ, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ಒಟ್ಟು 7 ಟಿಎಂಸಿ ನೀರು ಮಾತ್ರ ಸಂಗ್ರಹ ಇದೆ. ಕೆ.ಆರ್.ಎಸ್‌ನಲ್ಲಿ 2.825 ಟಿಎಂಸಿ, ಹಾರಂಗಿಯಲ್ಲಿ 1.556 ಟಿಎಂಸಿ, ಕಬಿನಿಯಲ್ಲಿ 0.68 ಟಿಎಂಸಿ, ಹೇಮಾವತಿಯಲ್ಲಿ 2 ಟಿಎಂಸಿ ನೀರು ಮಾತ್ರ ಇದೆ ಎಂದು ತಿಳಿಸಿದರು.
ಇನ್ನು ಬೆಂಗಳೂರು ನಗರ ಒಂದಕ್ಕೆ ಮೂರುವರೆ ಟಿಎಂಸಿ ನೀರು ಬೇಕು. ಹಾಸನ, ಮಡಿಕೇರಿ, ಮೈಸೂರು ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು ರೂರಲ್‌ಗೆ ಎರಡೂವರೆ ಟಿಎಂಸಿ ನೀರು ಬೇಕು. ಕೃಷಿಗೆ ಐದು ಟಿಎಂಸಿ ನೀರು ಬೇಕು. ನಾವು ತಮಿಳುನಾಡಿಗೆ 3.5 ಟಿಎಂಸಿ ನೀರು ಬಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೆ ನಮಗೆ ಬಹಳ ಸಮಸ್ಯೆ ಆಗುತ್ತದೆ ಎಂದು ಹೇಳಿದರು.
ಸೆಂಟ್ರಲ್ ವಾಟರ್ ಕಮಿಷನ್‌ನವರಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. ಈಗ ತಮಿಳುನಾಡಿಗೆ ನೀರು ಬಿಟ್ಟರೆ ಪರಿಸ್ಥಿತಿ ಕಷ್ಟವಾಗುತ್ತದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲಾಗಲ್ಲ ಎಂದರು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಹೇಳಬೇಕು. ಬಿಜೆಪಿಯವರು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾವೇರಿ ನೀರು ಬಿಡುವುದು ತಡೆಯುವುದು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆಮೇಲೆ ಮೀಡಿಯಾ ಮುಂದೆ ಬಾಯಿ ಬಡಿದುಕೊಳ್ಳಬೇಡಿ. ರಾಜ್ಯದ ಜನರಿಗೆ ನೀರು ಕೊಡಿಸುವ ಕೆಲಸ ಮಾಡಿ ಕೇಂದ್ರದಲ್ಲಿ ನಿಮ್ಮ ಸರ್ಕಾರವೇ ಇರುವುದು ಎಂದು ವಾಗ್ದಾಳಿ ಮಾಡಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…