ಮೈಸೂರು : ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಬಾದಾಮಿಗೆ ಹೋದ ನೀವು ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಮಾತನಾಡುತ್ತೀರಲ್ಲ ನಿಮಗೆ ಮನಸಾಕ್ಷಿ ಇದೆಯೆ ಎಂದು ಸಾರಾ ಮಹೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಮೈತ್ರಿ ಪಕ್ಷಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ವಿರುದ್ಧ 35ಸಾವಿ ಮತಗಳ ಅಂತರದಲ್ಲಿ ಸೋತು ಬಾದಾಮಿಗೆ ಹೋಗಿ ಸ್ಪರ್ಧೆ ಮಾಡಿದಿರಿ. ಹೀಗಾದಮೇಲೂ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಲು ನಿಮಗೆ ಮನಃಸಾಕ್ಷಿ ಇಲ್ಲವೆ ಎಂದು ಪ್ರಶ್ನೆ ಮಾಡಿದರು.