ಮೈಸೂರು: ಪ್ರಿಂಟ್ ಬ್ಯಾಗ್‌ಗಳನ್ನು ಮುದ್ರಿಸುತ್ತಿದ್ದ ಮಳಿಗೆಗೆ ಭೇಟಿ ನೀಡಿದ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಾವಿರಾರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರು ನಗರದ ವಲಯ ಕಚೇರಿ 1ರ ವ್ಯಾಪ್ತಿಯ ವಾರ್ಡ್ ನಂಬರ್.51ರ ಹರಿಶ್ಚಂದ್ರ ರಸ್ತೆಯಲ್ಲಿ ಬಹು ದಿನಗಳಿಂದ ನಾನ್ ಓವನ್ ಪ್ರಿಂಟ್ ಬ್ಯಾಗ್‌ಗಳನ್ನು ಮುದ್ರಿಸಲಾಗುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮೈಸೂರು ಪಾಲಿಕೆ ಅಧಿಕಾರಿಗಳು, ಅಲ್ಲಿದ್ದ 3710 ಕೆಜಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಸಹಾಯಕ ಆಯುಕ್ತ ಮಂಜುನಾಥ್ ರೆಡ್ಡಿ, ಪಾಲಿಕೆ ಆರೋಗ್ಯ ಅಧಿಕಾರಿ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಕರ್, ಮೀನಾಕ್ಷಿ, ಜ್ಯೋತಿ ಸೇರಿದಂತೆ ಅನೇಕ ಪೌರ ಕಾರ್ಮಿಕರು ಭಾಗಿಯಾಗಿದ್ದರು.
ಈ ದಾಳಿಯ ಬೆನ್ನಲ್ಲೇ ಅಕ್ರಮವಾಗಿ ಪ್ಲಾಸ್ಟಿಕ್ ತಯಾರು ಮಾಡುತ್ತಿರುವ ಜನರಿಗೆ ನಡುಕ ಶುರುವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಅಲ್ಲಿಗೆ ಮೈಸೂರು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಬಹುದು ಎಂಬ ಆತಂಕ ಶುರುವಾಗಿದೆ.
ಈ ಮೂಲಕ ಸಾಂಸ್ಕೃತಿಕ ನಗರಿಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಪಾಲಿಕೆ ಹಗಲಿರುಳು ಶ್ರಮ ವಹಿಸುತ್ತಿದ್ದು, ಇದಕ್ಕೆ ಸಾರ್ವಜನಿಕರು ಕೂಡ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…