ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ.
ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ತೀವ್ರ ಶೋಧ ಕೈಗೊಂಡಿದ್ದಾರೆ.
ಇದನ್ನು ಓದಿ: ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್ ಸ್ಫೋಟಕ ಇಡಲಾಗಿದೆ. ಅದು ಮಧ್ಯಾಹ್ನದ ವೇಳೆಗೆ ಸ್ಫೋಟಗೊಳ್ಳಲಿದೆ ಎಂಬ ಸಂದೇಶವೊಂದು ಅಪರಿಚಿತ ವ್ಯಕ್ತಿಯ ಇಮೇಲ್ ವಿಳಾಸದಿಂದ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು, ಸಾರ್ವಜನಿಕರು, ಸುತ್ತಮುತ್ತಲಿನ ಪ್ರದೇಶದ ಜನರು ಆತಂಕಗೊಂಡಿದ್ದಾರೆ. ಮಾಹಿತಿ ಪಡೆದ ಬಳಿಕ ಸರಗೂರು ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಡೌಡಾಯಿಸಿದ್ದು, ಶೋಧ ನಡೆಸುತ್ತಿದ್ದಾರೆ.
ಇನ್ನು ಹಾಸನ ಜಿಲ್ಲೆ ಆಲೂರು ತಾಲ್ಲೂಕು ಕಚೇರಿಗೂ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕಚೇರಿ ಸಿಬ್ಬಂದಿ ತಹಶೀಲ್ದಾರ್ ಮಲ್ಲಿಕಾರ್ಜುನ ಅವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ತಹಶೀಲ್ದಾರ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಚೇರಿ ಸಿಬ್ಬಂದಿಯನ್ನೆಲ್ಲಾ ಹೊರಕ್ಕೆ ಕಳುಹಿಸಿ ತಪಾಸಣೆ ನಡೆಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…