Threat to circulate young woman's photo on social media: FIR filed against four individuals
ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ.
ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ದೂರು ದಾಖಲಾಗಿದೆ.
ಕಳೆದ 9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಎಂಬವರ ಪರಿಚಯವಾಗಿದೆ. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿದೆ. ಮದುವೆ ಪ್ರಸ್ತಾಪವಾಗಿದೆ. ಈ ನಡುವೆ ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್‌ಗಳನ್ನ ಪಡೆದಿದ್ದಾನೆ. ಆಕೆ ಬೈಕ್ ಹಣ ಹಿಂದಿರುಗಿಸಿದರೂ ಚೆಕ್‌ಗಳನ್ನ ಹಿಂದಿರುಗಿಸಿಲ್ಲ. ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ. ಇಬ್ಬರೂ ಹಲವಾರು ಸ್ಥಳಗಳಲ್ಲಿ ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ. ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ನಿರಾಕರಿಸಿದ್ದಾನೆ.
ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ. ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಆಕೆ ನೀಡಿದ್ದ ಚೆಕ್‌ಗಳನ್ನು ಸ್ನೇಹಿತನ ಹೆಸರಲ್ಲಿ 8.50 ಲಕ್ಷ ರೂ. ಹಣ ಬರೆದು ಬ್ಯಾಂಕ್‌ಕೆ ನೀಡುವ ಮೂಲಕ ಚೆಕ್ ಬೌನ್ಸ್ ಮಾಡಿಸಿದ್ದಾನೆ.
ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ. ಮನೆಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ಆರೋಪಿಸುವ ನೊಂದ ಯುವತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಿದ್ದಾಳೆ.
ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ನಿಲ್ಲಿಸಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸದಾನಂದಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…