ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ.
ಸ್ಥಳಕ್ಕೆ ಮೈಸೂರು ತಹಶೀಲ್ದಾರ್ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಒತ್ತುವರಿಯಾಗಿದ್ದ 20 ಎಕರೆ ಸರ್ಕಾರಿ ಜಾಗವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದೇ ಜಾಗದಲ್ಲಿ ಸಿಎಂ ಕನಸಿನ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಹಲವು ದಿನಗಳಿಂದ ಇದೇ ಸ್ಥಳದಲ್ಲಿ ರೈತರು ಭೂಮಿ ವಶಕ್ಕೆ ಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಒತ್ತುವರಿಯಾಗಿರುವ ಜಾಗ ಸರ್ಕಾರಕ್ಕೆ ಸೇರಿದ್ದ ಜಾಗ ಎಂದು ರೈತರಿಗೆ ತಹಶೀಲ್ದಾರ್ ಮಹೇಶ್ ತಿಳಿ ಹೇಳಿದ್ದರು. ನಂತರ ರೈತರು ಪ್ರತಿಭಟನೆ ವಾಪಸ್ ಪಡೆದಿದ್ದರು.





