ಮೈಸೂರು

ಪ್ರಿಯಾಂಕ ಖರ್ಗೆಗೆ ಬೆದರಿಕೆ : ಸರ್ಕರ ಗಂಭೀರವಾಗಿ ಪರಿಗಣಿಸಿದೆ ಎಂದ ಹೋಂ ಮಿನಿಸ್ಟರ್‌

ಮೈಸೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕುತ್ತಿರುವ ಕರೆಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆದರಿಕೆ ಹಾಕುವವರ ಮೇಲೆ ಕಠಿಣ ಕ್ರಮಕೈಗೊಳ್ಳದ ಹೊರತು, ಇಂತಹ ಪ್ರಕರಣಗಳು ನಿಲ್ಲುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಇದನ್ನು ಓದಿ: ಜೀವ ಬೆದರಿಕೆ ಕರೆ ವಿಡಿಯೋ ರಿಲೀಸ್‌ ಮಾಡಿದ ಪ್ರಿಯಾಂಕ್‌ ಖರ್ಗೆ

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಬೇಕು ಎಂಬುದನ್ನು ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿ ಕ್ರಮಕೈಗೊಳ್ಳುತ್ತಾರೆ. ಸರ್ಕಾರ ಕೂಡ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಪರಿಶೀಲಿಸುತ್ತಿದೆ ಎಂದು ತಿಳಿಸಿದರು.

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ನಾನು ಆ ಬಗ್ಗೆ ನಿರ್ಧಾರಗಳನ್ನು ಹೇಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರೇ ತೀರ್ಮಾನ ಮಾಡಲಿದ್ದಾರೆ. ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿರುವುದನ್ನು ಪರಿಗಣಿಸಿದ್ದೇವೆ. ಯಾವ್ಯಾವ ನಂಬರ್‌ಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ. ಬೆದರಿಕೆ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಬೆದರಿಕೆ ಹಾಕುವವರ ಮೇಲೆ ಕ್ರಮ ಜರುಗಿಸದಿದ್ದಲ್ಲಿ ಇಂತಹ ಪ್ರಕರಣಕ್ಕೆ ಕಡಿವಾಣ ಹಾಕಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

1 hour ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

1 hour ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

1 hour ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

1 hour ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

1 hour ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

1 hour ago