ಮೈಸೂರು

ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಮೂರು ದಿನಗಳ ಮೈಸೂರು ಫೆಸ್ಟ್ -2024

ಮೈಸೂರು : ಮೈಸೂರು ಫೆಸ್ಟ್ -2024 ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗುತ್ತಿದ್ದು, ಮೈಸೂರಿನ ಕಲೆ, ಸಂಸ್ಕೃತಿ ಮತ್ತು ಪ್ರವಾಸಿತಾಣಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸಲು ಇದು ಒಂದು ಉತ್ತಮ ವೇದಿಕೆಯಾಗಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಕೆ. ಸವಿತಾ ತಿಳಿಸಿದರು.

ಇಂದು ಪ್ರವಾಸೋದ್ಯಮ ಇಲಾಖೆಯ ಮಯೂರ ಹೊಟೇಲ್ ನಲ್ಲಿ ಮೈಸೂರು ಫೆಸ್ಟ್-2024 ಕಾರ್ಯಕ್ರಮ ಸಿದ್ದತೆ ಕುರಿತು ನೇರ ಪಾಲುದಾರರೊಂದಿಗೆ ನಡೆದ ಪೂರ್ವಭಾವಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರಿನ ಅಂಶಗಳನ್ನು ಒಳಗೊಂಡ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಜನವರಿ 26,27,28 ಮೂರು ದಿನಗಳ ಕಾಲ ಕಾರ್ಯಕ್ರಮವನ್ನು ಅಯೋಜಿಸಲಾಗಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಜೊತೆಗೆ ಜನವರಿ 26 ರಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಇರುವ ಕ್ಲಾಕ್ ಟವರ್ ರಸ್ತೆಯ ಬದಿಯಲ್ಲಿ ಚಿತ್ರಸಂತೆ ಕಾರ್ಯಕ್ರಮವನ್ನು ಅಯೋಜಿಸಲಾಗುವುದು.

ಚಿತ್ರಸಂತೆ ಜೋತೆಗೆ ಚಿತ್ರಕಲಾಸ್ಪರ್ಧೆ ಅಯೋಜಿಸಲಾಗಿದ್ದು ಪ್ರಾವಿಣ್ಯತೆ ಹೊಂದಿರುವ ಕಲಾವಿದರು ಹಾಗೂ ಫ್ರೌಡಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಫರ್ಧೆಯಲ್ಲಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಸ್ಫರ್ಧೆಯಲ್ಲಿ ಭಾಗವಹಿಸಿ ವಿಜೇತರದವರಿಗೆ ಎರಡು ವಿಭಾಗದಲ್ಲಿ ಬಹುಮಾನವನ್ನು ನೀಡಲಾಗುವುದು.

ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಸ್ಥಳೀಯ ಕಲಾತಂಡಗಳಿಂದ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮೈಸೂರಿಗೆ ಆಗಮಮಿಸುವ ಪ್ರವಾಸಿಗರಿಗೆ ಉತ್ತಮ ಮನರಂಜನೆ ಜೊತೆಗೆ ಮೈಸೂರು ಕಲೆ, ಸಂಸ್ಕೃತಿ ಪ್ರೇಕ್ಷಣಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ನೀಡಲಾಗುವುದು ಎಂದರು.

ಜನವರಿ 27 ರಂದು ಮೈಸೂರು ಫೆಸ್ಟ್-2024ರ ವೇದಿಕೆ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಸಂಜೆ 5.30 ಕ್ಕೆ ಜಿಲ್ಲಾ ಉಸ್ತವಾರಿ ಸಚಿವರು ಅಧ್ಯಕ್ಷತೆಯಲ್ಲಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರ ಘನ ಉಪಸ್ಧಿತಿಯಲ್ಲಿ ಮತ್ತು ಜನಪ್ರತಿನಿಧಿಗಳಿಂದ ಉದ್ಘಾಟಿಸಲಾಗುವುದು.

ಸಂಜೆ 6.30 ರ ನಂತರ ಎರಡು ದಿನಗಳ ಕಾಲ ವೇದಿಕೆಯಲ್ಲಿ ವಿವಿಧ ಕಲಾ ತಂಡಗಳಿoದ ವಿವಿಧ ರೀತಿಯ ನಾಟ್ಯ ಕಲಾಪ್ರಕಾರಗಳ ಕಾರ್ಯಕ್ರಮವನ್ನು ಅಯೋಜಿಲಾಗುವುದು ಎಂದು ತಿಳಿಸಿದ್ದರು. ಮೈಸೂರು ಫೆಸ್ಟ್ ಅಂಗವಾಗಿ ಮೈಸೂರು ಕಾರ್ಯಕ್ರಮವು ಮೈಸೂರಿನ ಸ್ಥಳೀಯ ಅಂಶಗಳನ್ನು ಪ್ರವಾಸಿಗರಿಗೆ ತಲುಪಿಸುವ ಕಾರ್ಯಕ್ರಮವಾಗಿದ್ದು, ಸ್ಥಳೀಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು.

ಮೈಸೂರು ಫೆಸ್ಟ್- 2024 ಅಂಗವಾಗಿ ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಹೊಂದಿಕೊಂಡಂತೆ ಇರುವ ಸ್ಥಳಗಳಲ್ಲಿ ವಿವಿಧ ಉದ್ಯಮಗಳ ಮಳಿಗೆಗಳನ್ನು ಆಯೋಜಿಸಲಾಗುವುದು.

ಮಳಿಗೆಗಳಲ್ಲಿ ಮಾರಾಟ ಮತ್ತು ಪ್ರದರ್ಶನಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದ್ದು, ಜೊತೆಗೆ ಈ ಬಾರಿ ಪಾಲ್ಗೊಳ್ಳುವ ಸ್ಟಾಲ್‌ಗಳಲ್ಲಿ ಹೆಚ್ಚಿನ ರೀತಿಯಾಗಿ ಮೈಸೂರಿನ ಸ್ಥಳೀಯ ವಿಚಾರಗಳನ್ನು ತಿಳಿಸುವಂತಹ ಹಾಗೂ ಪ್ರಾಮುಖ್ಯತೆಯನ್ನು ಸಾರುವಂತ ಮಳಿಗೆಗಳಿಗೆ ಅವಕಾಶವನ್ನು ಕಲ್ಪಿಸಲಾಗುವುದು, ಪ್ರಮುಖವಾಗಿ ಮೈಸೂರಿನ ವಿಶೇಷ ಖಾದ್ಯಗಳು ಮತ್ತು ಮೈಸೂರಿನ ಸ್ಥಳೀಯ ಉತ್ಪನ್ನಗಳು ಹಾಗೂ ಮೈಸೂರಿನ ವಿಶೇಷವಾದ ತಿಂಡಿ ತಿನಿಸುಗಳ ಮಳಿಗೆಗಳಿಗೆ ಅವಕಾಶವನ್ನು ಕಲ್ಪಿಸಲಾಗುವುದು.

ಮನೆಗಳ ಅಲಂಕಾರಕ್ಕೆ ಸಂಬಂಧಿಸಿದಂತೆ, ಮಕ್ಕಳ ಆಟಿಕೆಗಳಿಗೆ ಸಂಬಂಧಿಸಿದಂತೆ, ಮಹಿಳೆಯರಿಗೆ ಸಂಬಂಧಿಸಿದಂತೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತಹ ಸ್ಟಾಲ್‌ಗಳಿಗೆ ಬ್ರ‍್ಯಾಂಡ್ ಮೈಸೂರು ಫೆಸ್ಟ್ ನಲ್ಲಿ ಅವಕಾಶವನ್ನು ನೀಡಲಾಗುವುದು ಎಂದರು.

ಜೊತೆಗೆ ಈ ಬಾರಿಯ ಮೈಸೂರು ಫೆಸ್ಟ್ನಲ್ಲಿ ಪ್ಲೀ-ಮಾರ್ಕೆಟಿಂಗ್ ಒಂದೇ ಸೂರಿನಲ್ಲಿ ಮೈಸೂರು ಬ್ರಾಂಡ್ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಹೊಸ ಬಗೆಯ ಮಳಿಗೆಗಳನ್ನು ತೆರೆಯಲಾಗುವುದು.

ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಬರುವ ಪ್ರವಾಸಿಗರಿಗೆ ಬ್ರಾಂಡ್ ಮೈಸೂರು ಫೆಸ್ಟ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು ಪ್ರವಾಸಿ ತಾಣಾಗಳಲ್ಲಿ ಪೋಸ್ಟರ್, ಬ್ಯಾನರ್ ಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದ್ದರು.

ಸಭೆಯಲ್ಲಿ ಹೋಟೆಲ್ ಮಾಲೀಕರ ಸಂಘದ ನಾರಾಯಣ ಗೌಡ, ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಅಧ್ಯಕ್ಷರಾದ ಪ್ರಶಾಂತ್, ಜಿಎಸ್ ಎಸ್ ಯೋಗ ಸಂಸ್ಧೆಯ ಅಧ್ಯಕ್ಷರಾದ ಶ್ರೀ ಹರಿ, ಚಾಲಕರ ಸಂಘದ ಅಧ್ಯಕ್ಷರಾದ ನಾಗರಾಜು, ಡಿ. ದೇವರಾಜು ಅರಸು ರಸ್ತೆ ಅಂಗಡಿ ಮಾಲೀಕರ ಹಾಗೂ ಬಾಡಿಗೆದಾರರ ಸಂಘದ ಅಧ್ಯಕ್ಷರಾದ ವೀರಭದ್ರ, ಅನುಮೋದಿತ ಮಾರ್ಗದರ್ಶಿ ಸಂಘಗಳ ಅಧ್ಯಕ್ಷರಾದ ಎಸ್.ಜೆ ಅಶೋಕ್ ಹಾಗೂ ಟ್ರಾವೆಲ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಜೆ.ಪಿ ಅರಸು , ಮಹಾಲಕ್ಷ್ಮಿ ಸ್ವೀಟ್ ಹೌಸ್, ಭೀಮಾ ಜುಯೆಲರ್ಸ್ ಹಾಗೂ ನಗರ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

7 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

8 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

8 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

8 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

8 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

9 hours ago