ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಕೊಡಗು, ಮಂಡ್ಯ, ಹಾಸನ, ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೇಸಿಗೆ ಬಿಸಿಲು ಜೋರಾಗಿದ್ದು, ಅಂತೆಯೇ ಪೂರ್ವ ಮುಂಗಾರು ಚುರುಕಾಗುತ್ತಿದೆ. ಏ.7ರಿಂದ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 8ರ ತನಕ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 7 ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ, ಏಪ್ರಿಲ್ 8 ರಂದು ಕೊಡಗು, ಹಾಸನ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ, ಕರಾವಳಿ ಮತ್ತು ಮಲೆನಾಡಿನಲ್ಲಿ ಕೊಡಗು, ಹಾಸನ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಏ.7ರಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ದಕ್ಷಿಣ ಒಳನಾಡಿನಲ್ಲಿ ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏ.8 ಮತ್ತು 9ರಂದು ಮಳೆ ಮುಂದುವರಿಯಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ.




