ಸರಗೂರು : ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಚಂಗೌಡನಹಳ್ಳಿ ಗ್ರಾಮದ ಶಾಹೀರಾ ಭಾನು(20), ಶಾವರ ಭಾನು(35) ಮಹಮ್ಮದ್ ಕಪೀಲ್(42) ಮೃತ ದುರ್ದೈವಿಗಳು. ಇವರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು. ಸರಗೂರಿನ ತಮ್ಮ ಅಜ್ಜಿಯ ತಿಥಿಕಾರ್ಯ ಮುಗಿಸಿ, ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದಾಗ ಆಯತಪ್ಪಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಾಲು ಜಾರಿ ನಾಲೆಯೊಳಗೆ ಬಿದ್ದ ಶಾಹೀರಾ ಭಾನು ಅವರನ್ನು ತಾಯಿ ಶಾವರ ಬಾನು ರಕ್ಷಿಸಲು ಮುಂದಾಗಿದ್ದಾರೆ. ಆಗ ಶಾವರ ಬಾನು ನಾಲೆಯಲ್ಲಿ ಮುಳುಗುತ್ತಿದ್ದುದ್ದನ್ನು ಕಂಡ ಪತಿ ಮಹಮ್ಮದ್ ಕಪೀಲ್ ಕೂಡ ಇಬ್ಬರನ್ನು ರಕ್ಷಿಸಲು ಮುಂದಾದಾಗ ತಾವೂ ಮುಳುಗಿ ಸಾವನ್ನಪ್ಪಿದ್ದಾರೆ.
ಕೂಡಲೇ ಸರಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…