ಮೈಸೂರು: ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಲೋಕಸಭಾ ಚುನಾವಣೆ ಸಂಬಂಧ ಸ್ವೀಪ್ ಚಟುವಟಿಕೆಗಳಿಗೆ ಮತ್ತೆ ಮೂರು ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಯಭಾರಿಗಳನ್ನಾಗಿ ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ. ಗಾಯಿತ್ರಿ ತಿಳಿಸಿದ್ದಾರೆ.
ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕರಾದ ಬಿ.ಎಸ್. ಕೃಪಾಕರ ಹಾಗೂ ಕೆ.ಸೇನಾನಿ ಮತ್ತು ರೂಪದರ್ಶಿ ತನಿಷ್ಕಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಮತದಾರರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಲಿದ್ದಾರೆ ಮತ್ತು ಜಿಲ್ಲಾಡಳಿತದಿಂದ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.