ಮೈಸೂರು: ರಾಜ್ಯ ಸರ್ಕಾರದ ಮೈಸೂರು ಜಿಲ್ಲಾ ಪಂಚಾಯತಿಯ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ನಗರ ಉತ್ತರ ವಲಯದ ಕುಂಬಾರ ಕೊಪ್ಪಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ನೂತನ ಕೊಠಡಿಗಳನ್ನು ಶಾಸಕ ಹರೀಶ್ ಗೌಡ ಅವರು ಉದ್ಘಾಟಿಸಿದರು.
ಸೋಮವಾರ (ಆ.19) ರಾಜ್ಯ ಸರ್ಕಾರದ ವಿವೇಕ ಶಾಲಾ ಯೋಜನೆಯ ಅಂದಾಜು ಮೊತ್ತ 45ಲಕ್ಷ ಮೊತ್ತದಲ್ಲಿ ಆಗಿರುವ ಕಾಮಗಾರಿಯನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ನನ್ನ ಕ್ಷೇತ್ರದಲ್ಲಿ ಅತಿಹೆಚ್ಚು ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿವೆ. ಅವುಗಳಿಗೆ ಹೆಚ್ಚಿನ ದಾಖಲಾತಿ ಆಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಕಲ್ಪಿಸಲು ಸರ್ಕಾರ ಹಾಗೂ ಸಿ.ಎಸ್.ಆರ್ ಅನುದಾನಕ್ಕೆ ಸೂಕ್ತ ರೂಪುರೇಷೆ ಸಿದ್ದಪಡಿಸಿ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ಮುಖ್ಯ ಶಿಕ್ಷಕರು ಬಳಸಿಕೊಂಡು ಬಡಜನರು ಖಾಸಗಿ ಶಿಕ್ಷಣ ಸಂಸ್ಥೆಗಳ ಮೊರೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ಜತೆಗೆ ಇಂದಿನಿ ಸ್ಪರ್ಧಾತ್ಮಕ ಶಿಕ್ಷಣದಲ್ಲಿಯೂ ಪೈಪೋಟಿ ನೀಡುವ ಶಿಕ್ಷಣ ಸವಾಲು ಅರಿತುಕೊಳ್ಳಬೇಕು. ಈ ದಿಸೆಯಲ್ಲಿ ಈ ಶಾಲೆಯೂ ಮುಂದುವರೆಯಬೇಕೆಂದು ಆಶಿಸುತ್ತೇನೆಂದರು.
ಇದೇ ವೇಳೆ ಒಂದು ವರ್ಷಗಳ ಕಾಲ ಸ್ಮಾರ್ಟ್ ಕ್ಲಾಸ್ ತರಗತಿ ನಡೆಸಲು ಬೇಕಾಗುವ ಉಚಿತ ಇಂಟರ್ನೆಟ್ ಸೌಲಭ್ಯವನ್ನು ಶಾಸಕರು ವೈಯುಕ್ತಿಕವಾಗಿ ಭರಿಸಿಕೊಟ್ಟಿರುವುದಕ್ಕೆ ಶಾಲಾ ಮುಖ್ಯೋಪಾಧ್ಯರು ಹಾಗೂ ಶಿಕ್ಷಕರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
ಸದರಿ ಕಾರ್ಯಕ್ರಮದಲ್ಲಿ ಬಿ.ಇ.ಓ, ಸಿ.ಡಿ.ಪಿ.ಓ., ಪಿ.ಆರ್.ಇ.ಡಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕುಂಬಾರುಕೊಪ್ಪಲು ಗ್ರಾಮದ ಮುಖಂಡರು, ಪೋಷಕರು ಹಾಗೂ ಚಾಮರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಮಳವಳ್ಳಿ : ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…
ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…
ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…
ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ…
ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ…
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್…