ಮೈಸೂರು

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ವೀಕ್ಷಣೆಗೆ ಶುಲ್ಕ ನಿಗದಿಪಡಿಸಲು ಮುಂದಾಗಿ ಸಚಿವರ ವಾರ್ನಿಂಗ್‌ಗೆ ಹೆದರಿ ಕೈ ಬಿಟ್ಟಿದ್ದಾರೆ.

ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಏಕಾಏಕೀ ವೀಕ್ಷಣೆಗೆ ಶುಲ್ಕ ನಿಗದಿಪಡಿಸಿದ್ದರು. ಇದರಿಂದ ಪಿಸಿಸಿಎಫ್ ಕುಮಾರ್ ಪುಷ್ಕರ್ ಅವರು ಚಾಟಿಬೀಸಿದ್ದಾರೆ. ದಸರಾ ಗಜಪಡೆಯನ್ನು ವೀಕ್ಷಿಸಲು ಶುಲ್ಕ ನಿಗದಿಪಡಿಸಿರುವ ವಿಷಯ ಮಾಧ್ಯಮಗಳಲ್ಲಿ ಪ್ರಕಟಗೊಂಡು ತೀವ್ರ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರವೇಶ ಶುಲ್ಕವನ್ನು ರದ್ದು ಮಾಡಿದೆ.‌

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರ ಸಲಹೆ ಮೇರೆಗೆ ಅರಣ್ಯ ಇಲಾಖೆ ಗಜಪಡೆಯ ದರ್ಶನಕ್ಕೆ ಟಿಕೆಟ್ ವ್ಯವಸ್ಥೆ ಜಾರಿ ಮಾಡಿತ್ತು ಎನ್ನಲಾಗಿದೆ. ಜನರ ವಿರೋಧದಿಂದ ಎಚ್ಚೆತ್ತು, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯ ಬಳಿಕ ಅದನ್ನು ತಕ್ಷಣವೇ ರದ್ದುಪಡಿಸಲಾಗಿದೆ. ಅರಮನೆ ಅಂಗಳದಲ್ಲಿ ಆನೆಗಳ ವೀಕ್ಷಣೆಗೆ ಬರುವ ಸಾರ್ವಜನಿಕರಿಂದ ಇದೇ ಮೊದಲ ಬಾರಿಗೆ ವಯಸ್ಕರಿಗೆ ೧೦೦ ರೂ., ಮಕ್ಕಳಿಗೆ ೫೦ ರೂ., ನಿಗದಿ ಮಾಡಲಾಗಿತ್ತು.

ಅರಮನೆ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ಇಚ್ಛಿಸಿದ್ದಲ್ಲಿ ದಸರಾ ಆನೆಗಳನ್ನು ವೀಕ್ಷಿಸಲು ಅರಣ್ಯ ಇಲಾಖೆ ವತಿಯಿಂದ ಇ-ಟೆಕೆಟಿಂಗ್ ಸೌಲಭ್ಯವನ್ನು ನೀಡಲಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವುದು ಕಂಡು ಬಂದಿದ್ದು, ಈ ವಿಷಯವು ಕೇವಲ ಚಿಂತನಾ ಹಂತದಲ್ಲಿತ್ತು. ಆದರೆ, ಆನೆಗಳ ವೀಕ್ಷಣೆಗೆ ಟಿಕೆಟ್ ವ್ಯವಸ್ಥೆ ಇಲ್ಲ ಎಂದು ವನ್ಯಜೀವಿ ವಿಭಾಗದ ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

1 hour ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

1 hour ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

1 hour ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago