ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಚಾಕಹಳ್ಳಿಯಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದೆ.
ನಾಗರಹೊಳೆ ಅರಣ್ಯದಿಂದ ನಾಡಿಗೆ ಎಂಟ್ರಿಯಾಗಿರುವ ಹುಲಿಯು ಕಳೆದ ಕೆಲ ದಿನಗಳಿಂದ ತನ್ನ ಉಪಟಳ ನೀಡುತ್ತಿದ್ದು, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ.
ಚಾಕಹಳ್ಳಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.
ಗ್ರಾಮದ ಖ್ಯಾತನಾಯಕ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಹುಲಿ ದಾಳಿಯಿಂದ ಹಸುವಿನ ಮೈಮೇಲೆ ಹಾಗೂ ಹಿಂಭಾಗದ ಕಾಲುಗಳಿಗೆ ತೀವ್ರ ಗಾಯಗಳಾಗಿದೆ.
ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.