ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಹುಲಿ ಸೆರೆ ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಇದೇ ಸ್ಥಳದಲ್ಲಿ ಹುಲಿ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಆದರೆ ಇದೀಗ ಮತ್ತೊಮ್ಮೆ ಅದೇ ಭಾಗದಲ್ಲಿ ಕಾಣಿಸಿಕೊಂಡು ಜಾನುವಾರುವನ್ನು ತಿಂದು ತೇಗಿದೆ.
ಹುಲಿ ದಾಳಿಯಿಂದ ತೀವ್ರ ಭಯಭೀತರಾಗಿರುವ ಗ್ರಾಮಸ್ಥರು ವ್ಯಾಘ್ರನನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಏನೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾವೇ ಹುಲಿಯನ್ನು ಕಾಡಿಗೆ ಓಡಿಸುತ್ತೇವೆ ಎಂದು ಕಿಡಿಕಾರಿದ್ದಾರೆ.