ಎಚ್.ಡಿ.ಕೋಟೆ: ಹುಲಿ ದಾಳಿಗೆ ಸಿಲುಕಿ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ಹಠಾತ್ ದಾಳಿ ನಡೆಸಿದೆ. ಪರಿಣಾಮ ಒಂದು ಹಸು ಸಾವನ್ನಪ್ಪಿದ್ದು, ಮತ್ತೊಂದು ಹಸುವಿನ ಸ್ಥಿತಿ ಗಂಭೀರವಾಗಿದೆ.
ಹುಲಿ ದಾಳಿಯಿಂದ ಆತಂಕಗೊಂಡಿರುವ ಜನರು, ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೋನು ಅಳವಡಿಸುವ ಭರವಸೆ ನೀಡಿದ್ದಾರೆ.
ಮೊನ್ನೆಯಷ್ಟೇ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿಗೆ ಸಿಲುಕಿ ರೈತ ರಾಜಶೇಖರಮೂರ್ತಿ ಎಂಬುವವರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಈ ಭಾಗದಲ್ಲಿ ಮತ್ತೆ ಹುಲಿ ದಾಳಿ ನಡೆಸಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…