ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ.
ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಯಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ ಹುಲಿಯು ಮತ್ತೂಂದು ಗಂಡು ಹುಲಿಯ ಜೊತೆ ಕಾದಾಟ ನಡೆಸಿ ತೀವ್ರ ಗಾಯಗೊಂಡಿತ್ತು. ಈ ಹುಲಿಯು ಮೂರ್‍ನಾಲ್ಕು ದಿನಗಳ ಹಿಂದೆ ಕುಟ್ಟ-ಪೊನ್ನಂಪೇಟೆ ಮುಖ್ಯ ರಸ್ತೆ ಮಧ್ಯದಲ್ಲೇ ಕುಳಿತು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿತ್ತು.
ನಾಗರಹೊಳೆ ಡಿಸಿಎಫ್ ಸೀಮಾ ಪಿ.ಎ.ರವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಿ ಶಾರ್ಪ್ ಶೂಟರ್ ಕೆ.ಪಿ.ರಂಜನ್‌ರವರು ಅರವಳಿಕೆ ಚುಚ್ಚುಮದ್ದು ನೀಡಿದರು. ಬಳಿಕ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿಗಳಾದ ಡಾ.ಎಚ್.ರಮೇಶ್, ಡಾ.ವಾಸಿಂ ಮಿರ್ಜಾರವರು ನಿತ್ರಾಣಗೊಂಡಿದ್ದ ಹುಲಿಯ ಮೈಮೇಲೆ ಆಗಿದ್ದ ಗಾಯಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು.
ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಹುಲಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ವಾಹನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಸೀಮಾ ಮಾಹಿತಿ ನೀಡಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…