Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ದನಗಾಹಿಗಳ ಕಣ್ಣೆದುರೇ ಹಸುವನ್ನು ಕೊಂದ ಹುಲಿ

ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ.

ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ ತಮ್ಮ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಬಂದು ಹಸುವಿನ ಕುತ್ತಿಗೆ ಭಾಗಕ್ಕೆ ದಾಳಿಯಿಟ್ಟು ಹಸುವಿನ ರಕ್ತ ಹೀರಿ ಸಾಯಿಸಿದೆ. ಹುಲಿ ಕಂಡು ಗಾಬರಿಗೊಂಡ ವೆಂಕಟೇಶ್ ಹಾಗೂ ಅಕ್ಕಪಕ್ಕದಲ್ಲಿ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿಗಳು ಗಾಬರಿಗೊಂಡು ಜೋರಾಗಿ ಕೂಗಾಟ ನಡೆಸಿದ್ದರಿಂದ ಗಾಬರಿಗೊಂಡ
ಹುಲಿಯು ಪಕ್ಕದ ಶೆಟ್ಟಹಳ್ಳಿ ಅರಣ್ಯದೊಳಗೆ ಸೇರಿಕೊಂಡಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಢಾಯಿಸಿ ಸುತ್ತಮುತ್ತ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿ, ಕುರಿಗಾಹಿಗಳನ್ನು ತಕ್ಷಣವೇ ಸ್ಥಳದಿಂದ ತೆರಳುವಂತೆ ಎಚ್ಚರಿಸಿ ಕಳುಹಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಇದೇ ಸ್ಥಳದಲ್ಲಿ ವೆಂಕಟೇಶ್ ರವರಿಗೆ ಸೇರಿದ ತೆನೆ ಹಸುವನ್ನು ಹುಲಿ ದಾಳಿ ನಡೆಸಿ ಕೊಂದುಹಾಕಿತ್ತು.

ಈ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು, ಆಗಾಗ್ಗೆ ಹುಲಿ ದಾಳಿ ನಡೆಸಿ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ. ಕೂಡಲೇ ಬೋನು ಇಟ್ಟು ಹುಲಿ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Tags:
error: Content is protected !!