ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ.
ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ ತಮ್ಮ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಬಂದು ಹಸುವಿನ ಕುತ್ತಿಗೆ ಭಾಗಕ್ಕೆ ದಾಳಿಯಿಟ್ಟು ಹಸುವಿನ ರಕ್ತ ಹೀರಿ ಸಾಯಿಸಿದೆ. ಹುಲಿ ಕಂಡು ಗಾಬರಿಗೊಂಡ ವೆಂಕಟೇಶ್ ಹಾಗೂ ಅಕ್ಕಪಕ್ಕದಲ್ಲಿ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿಗಳು ಗಾಬರಿಗೊಂಡು ಜೋರಾಗಿ ಕೂಗಾಟ ನಡೆಸಿದ್ದರಿಂದ ಗಾಬರಿಗೊಂಡ
ಹುಲಿಯು ಪಕ್ಕದ ಶೆಟ್ಟಹಳ್ಳಿ ಅರಣ್ಯದೊಳಗೆ ಸೇರಿಕೊಂಡಿದೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಢಾಯಿಸಿ ಸುತ್ತಮುತ್ತ ಜಾನುವಾರು, ಕುರಿಗಳನ್ನು ಮೇಯಿಸುತ್ತಿದ್ದ ದನಗಾಹಿ, ಕುರಿಗಾಹಿಗಳನ್ನು ತಕ್ಷಣವೇ ಸ್ಥಳದಿಂದ ತೆರಳುವಂತೆ ಎಚ್ಚರಿಸಿ ಕಳುಹಿಸಿದ್ದಾರೆ.
ಎರಡು ತಿಂಗಳ ಹಿಂದಷ್ಟೇ ಇದೇ ಸ್ಥಳದಲ್ಲಿ ವೆಂಕಟೇಶ್ ರವರಿಗೆ ಸೇರಿದ ತೆನೆ ಹಸುವನ್ನು ಹುಲಿ ದಾಳಿ ನಡೆಸಿ ಕೊಂದುಹಾಕಿತ್ತು.
ಈ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗಿದ್ದು, ಆಗಾಗ್ಗೆ ಹುಲಿ ದಾಳಿ ನಡೆಸಿ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿದೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುವಂತಾಗಿದೆ. ಕೂಡಲೇ ಬೋನು ಇಟ್ಟು ಹುಲಿ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…