ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಗುರುಪುರ ಟಿಬೆಟ್ ನಿರಾಶ್ರಿತರ ಕೇಂದ್ರದ ಎಚ್.ವಿಲೇಜ್‌ನ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ 8 ರ ಸಮಯದಲ್ಲಿ ಹುಲಿ ನಡೆದುಕೊಂಡು ಬರುತ್ತಿರುವುದನ್ನು ನಿರಾಶ್ರಿತ ಕೇಂದ್ರದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಹನಗೋಡು ಹೋಬಳಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ನಿತ್ಯ ಅಲ್ಲಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ.





