ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಕನಕೋಟೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಹುಲಿಯೊಂದು ದರ್ಶನ ನೀಡಿದೆ.
ಸಫಾರಿಗೆ ತೆರಳುವ ಪ್ರವಾಸಿಗರಿಗೆ ವನ್ಯಮೃಗಗಳು ಕಾಣಿಸುವುದು ಸರ್ವೇ ಸಾಮಾನ್ಯ. ಆದರೆ ಸಫಾರಿ ವೇಳೆ ಹುಲಿ ಕಾಣಿಸಿಕೊಳ್ಳುವುದು ತೀರಾ ಅಪರೂಪ.
ಇಂದು ಬೆಳಿಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಹುಲಿಯನ್ನು ಕಂಡ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
ಸಫಾರಿಗರ ಕ್ಯಾಮರಾದಲ್ಲಿ ಹುಲಿಯ ಅದ್ಭುತ ದೃಶ್ಯ ಸೆರೆಯಾಗಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.





