ಮೈಸೂರು

ಮೈಸೂರು-ನಂಜನಗೂಡು ಸುತ್ತಾಮುತ್ತ ಹುಲಿ ಪ್ರತ್ಯಕ್ಷ

ಮೈಸೂರು: ಸಾಮಾನ್ಯವಾಗಿ ಮೈಸೂರು ಸುತ್ತಮುತ್ತಲಿನ ತಾಲೂಕು ಹೋಬಳಿಗಳಲ್ಲಿ ಚಿರತೆ ಕಾಟ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಇದೀಗ ಹುಲಿರಾಯ ಕಾಡನ್ನು ಬಿಟ್ಟು ನಾಡಿನಲ್ಲಿ ದರ್ಶನ ನೀಡಿದ್ದಾನೆ.  ಮೈಸೂರು ತಾಲೂಕಿನ ಬ್ಯಾತಳ್ಳಿ, ದೊಡ್ಡಕಾನ್ಯ ಮತ್ತು ಕಡಕೊಳ ಬಳಿ ಹುಲಿ ಕಾಣಿಸಿಕೊಂಡಿದ್ದು, ತಡರಾತ್ರಿ ಈ ಮಾರ್ಗ ಮಧ್ಯ ಸಂಚರಿಸುವವರಿಗೆ ವ್ಯಾಘ್ರನ ದರ್ಶನವಾಗಿದೆ.
ಈ ಮಾರ್ಗದ ಸುತ್ತ ಕೈಗಾರಿಕಾ ಪ್ರದೇಶವಾದ್ದರಿಂದ ಹೆಚ್ಚಾಗಿ ಕಾರ್ಮಿಕರು ಸಂಚಾರ ಮಾಡುತ್ತಾರೆ. ಹುಲಿರಾಯನ ದರ್ಶನದ ಬಳಿಕ ಈ ಮಾರ್ಘದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.

ಕಾಡಂಚಲ್ಲದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ನಂಬಲು ಅಸಾಧ್ಯ. ಈ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವ ಬಗ್ಗೆ ಅನೇಕರು ಮಾಹಿತಿ ನೀಡಿದ್ದಾರೆ.ಯಾರು ಭಯಪಡುವ ಅಗತ್ಯವಿಲ್ಲ, ಹುಲಿಯನ್ನು ಪತ್ತೆಹಚ್ಚಿ ಕಾಡಿಗೆ ಕಳಿಸುವ ಕೆಲಸ ಮಾಡಲಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸುರೇಂದ್ರ ತಿಳಿಸಿದ್ದಾರೆ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

13 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago