ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಮೊಬೈಲ್‌ನಲ್ಲಿ ಹುಲಿಗಳ ದೃಶ್ಯ ಸೆರೆಯಾಗಿದೆ.
ವಾಹನ ಸವಾರರರನ್ನು ಕಂಡೊಡನೆ ಹುಲಿ ಘರ್ಜಿಸಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.
ಹುಲಿಗಳು ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.
ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಚೆ ಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದ್ದು, ಆದಷ್ಟು ಬೇಗ ವ್ಯಾಘ್ರನನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.