ಮೈಸೂರು

ಮೈಸೂರು: ಮೂಡಲಹುಂಡಿ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ

ಮೈಸೂರು: ಜಿಲ್ಲೆಯ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಹುಂಡಿ ಗ್ರಾಮದಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ.

ಮೂಡಲಹುಂಡಿ ಗ್ರಾಮ ಉದ್ಭವ ಮಾದೇಶ್ವರ ದೇವಾಲಯದ ಬಳಿ ಹುಲಿರಾಯ ಪ್ರತ್ಯಕ್ಷವಾಗದ್ದು, ಗ್ರಾಮದ ನಡುರಸ್ತೆಯಲ್ಲೇ ಓಡಾಡುತ್ತಿರುವ ಹುಲಿರಾಯನ ಕಂಡು ಗ್ರಾಮಸ್ಥರು‌ ಬೆಚ್ಚಿಬಿದ್ದಿದ್ದಾರೆ.

ಹಲವು ದಿನಗಳಿಂದ ಚಿರತೆ ಕಾಟದಿಂದ ಬೇಸತ್ತಿದ್ದ ಗ್ರಾಮಸ್ಥರಿಗೆ ಹುಲಿ ಪ್ರತ್ಯಕ್ಷದಿಂದಾಗಿ ಭಯಹುಟ್ಟಿದೆ.

ಹುಲಿ ವಿರಾಜಮಾನವಾಗಿ ಓಡಾಟ ಮಾಡುತ್ತಿರುವುದನ್ನು ವಾಹನ ಸವಾರರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ತಕ್ಷಣ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

5 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

5 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

5 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

5 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

6 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

6 hours ago