ಮೈಸೂರು: ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಜಿಟಿ ಜಿಟಿ ಮಳೆಯ ನಡುವೆ ಕೆರೆಯಲ್ಲಿ ಹುಲಿಯೊಂದು ಆಟವಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ದಮ್ಮನಕಟ್ಟೆ ಸಫಾರಿ ವೇಳೆ ಕೆರೆಯೊಂದರಲ್ಲಿ ಹುಲಿರಾಯ ಮಳೆಗೆ ಮೈಯೊಡ್ಡಿ ಕುಳಿತು ಸುಮಾರು ಎರಡು ಗಂಟೆಗಳ ಕಾಲ ಆಟವಾಡಿದ್ದಾನೆ. ಈ ದೃಶ್ಯವನ್ನು ಕಂಡು ಸಫಾರಿಗೆ ತೆರಳಿದ್ದ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಹುಲಿಯ ಆಟದ ದೃಶ್ಯ ಅನುಪ್ ರವಿಶಂಕರ್ ಎಂಬುವವರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಇನ್ನು ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವ ಪರಿಣಾಮ ಕಾಡು ಹಚ್ಚಹಸಿರಿನಿಂದು ಕೂಡಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ವೀಕೆಂಡ್ ಬಂದರೆ ಸಾಕು ಪ್ರವಾಸಿಗರು ಸಫಾರಿಗೆ ತೆರಳುತ್ತಿದ್ದು, ಪ್ರಕೃತಿ ಸೌಂದರ್ಯ ಸವಿಯುವುದರ ಜೊತೆಗೆ ವನ್ಯಜೀವಿಗಳನ್ನು ಕಣ್ತುಂಬಿಕೊಂಡು ಎಂಜಾಯ್ ಮಾಡುತ್ತಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…