ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಜಮೀನೊಂದರಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರನ್ನು ಭಯಭೀತರನ್ನಾಗಿಸಿದೆ.
ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಮೀನುಗಳಿಗೆ ಹೋಗಲು ಸ್ಥಳೀಯರು ಭಯಪಡುತ್ತಿದ್ದು, ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿರುವ ರೈತರು, ಇತ್ತೀಚೆಗೆ ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜಮೀನುಗಳಿಗೆ ತೆರಳಲು ಭಯವಾಗುತ್ತಿದೆ. ಇಷ್ಟೆಲ್ಲಾ ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈಗ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಕಾಡುಪ್ರಾಣಿಗಳು ಮುಂದಿನ ದಿನಗಳಲ್ಲಿ ನಮ್ಮ ಮೇಲೂ ದಾಳಿ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದಷ್ಟು ಬೇಗ ಹುಲಿಯನ್ನು ಸೆರೆ ಹಿಡಿದು ಆತಂಕ ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.





