ಮೈಸೂರು: ಇಲವಾಲ ವ್ಯಾಪ್ತಿಯ ಆರ್‌ಎಂಪಿ ಪ್ರೀಮಿಸ್ ಬಳಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.
ಬಿಳಿಕೆರೆ-ಇಲವಾಲ ವ್ಯಾಪ್ತಿಯಲ್ಲಿ ಹುಲಿ ಓಡಾಡುತ್ತಿದ್ದು, ಕಳೆದ ಮೂರು ದಿನಗಳಿಂದಲೂ ಸಾರ್ವಜನಿಕರ ಕಣ್ಣಿಗೆ ಗೋಚರಿಸುತ್ತಿದೆ. ಹುಲಿ ಓಡಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಜಮೀನುಗಳಿಗೆ ಹೋಗಲು ಸಾರ್ವಜನಿಕರು ಭಯಪಡುತ್ತಿದ್ದಾರೆ.
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದು, ಆದಷ್ಟು ಬೇಗ ಹುಲಿಯನ್ನು ಸೆರೆ ಹಿಡಿಯಲು ಬೋನು ಅಳವಡಿಸುವಂತೆ ಒತ್ತಾಯಿಸಿದ್ದಾರೆ.





