ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದ ಘಟನೆ ನಡೆದಿದೆ.
ಗೌಡನ ಕಟ್ಟೆ ಪ್ರದೇಶದಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಏಕಾಏಕಿ ಹುಲಿ ದಾಳಿ ನಡೆಸಿದೆ. ಘಟನೆಯ ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಹುಲಿಯನ್ನು ಶೀಘ್ರದಕ್ಕೇ ಸೆರೆಹಿಡಿಯುವಂತೆ ಆಗ್ರಹಿಸಿದರು.
ಸ್ಥಿತಿಗತಿಯ ಮಾಹಿತಿ ಪಡೆದುಕೊಂಡ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.





