ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.
ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ ಕಾಣಿಸಿಕೊಂಡಿದ್ದು, ಕಾರ್ಖಾನೆ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ.
ಬೆಮೆಲ್ ಆವರಣದ ಇಂಜೆನ್ ಸೆಕ್ಷನ್ ರಸ್ತೆಯಲ್ಲಿ ಬೆಳಗಿನ ಜಾವ ನಾಲ್ಕು ಗಂಟಟೆಯ ವೇಳೆಯಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಗೆ ಹುಲಿ ಹೋಗುತ್ತಿರುವುದು ಕಂಡು ಬಂದಿದಿಎ. ಮೊದಲಿಗೆ ಚಿರತೆ ಎಂದು ಭಾವಿಸಿದ ಸಿಬ್ಬಂದಿ ಕಾರಿನಲ್ಲಿ ಅದನ್ನು ಹಿಂಬಾಲಿಸಿದಾಗ ಹುಲಿ ಎಂದು ಖಚಿತವಾಗಿದೆ. ಸದ್ಯ ಈ ದೃಶ್ಯ ಎಲ್ಲೆಡೆ ವೈರಲ್ ಆಗಿದೆ.
ಅರಣ್ಯ ಇಲಾಖೆಯಿಂದ ಸಿಬ್ಬಂದಿಗಳಿಗೆ ಎಚ್ಚರಿಕೆ
ರಾತ್ರಿ ವೇಳೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಈಗಾಗಲೇ ಅಧಿಕಾರಿಗಳು ಉದ್ಯೋಗಿಗಳಿಗೆ ಸೂಚಿಸಿದ್ದು, ವಿಷಯ ತಿಳಿದ ಕೂಡಲೇ ಹುಲಿ ಸೆರೆ ಹಿಡಿಯಲು ಕಾರ್ಯಪಡೆ ತಂಡ ಕಾರ್ಯನಿರ್ವಹಿಸುತ್ತಿದೆ. ತಂಡದಲ್ಲಿ ಪಶುವೈದ್ಯ ಸೇರಿ 20 ಸಿಬ್ಬಂದಿ ಇದ್ದಾರೆ. ಇಲವಾಲ ವ್ಯಾಪ್ತಿಯ ಆರ್. ಎಫ್. ಓ. ಸಂತೋಷ್ ಹೂಗಾರ್ ಡಿ. ಆರ್.ಎಫ್. ಓ ಸುಂದರ್ ಮತ್ತು ಸಿಬ್ಬಂದಿಗಳು ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಅರಣ್ಯ ಇಲಾಖೆ ಗಸ್ತು
ಅರಣ್ಯ ಇಲಾಖೆ ಅಧಿಕಾರಿಗಳು ಬೆಮೆಲ್ ಒಳಗಡೆ ಹಾಗೂ ಹೊರಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಹುಲಿ ಸೆರೆಗೆ ಪ್ಲಾನ್ ರೂಪಿಸಿದ್ದಾರೆ. ಇನ್ನು ಸುತ್ತಮುತ್ತಲಿನ ಪ್ರದೇಶದ ಜನರಲ್ಲೂ ಆತಂಕ ಮನೆ ಮಾಡಿದೆ. ತಕ್ಷಣ ಹುಲಿ ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ
ಕ್ಯೂಂಬಿಂಗ್ ಕಾರ್ಯಚರಣೆ ಆರಂಭ
ಬೆಮೆಲ್ ಆವರಣ ಸುತ್ತ ಮುತ್ತ ಕೆಲವು ಭಾಗ ಅರಣ್ಯದಂತೆಯೇ ಇದ್ದು ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಹುಲಿ ಕಂಡುಬಂದಿದ್ದ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಅವಶ್ಯವಿದ್ದಲ್ಲಿ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಹುಲಿ ಸೆರೆ ಹಿಡಿದು ಆತಂಕ ದೂರ ಮಾಡಲಾಗುತ್ತದೆ ಎಂದು ಡಿ ಸಿ ಎಫ್ ಪರಮೇಶ್ ತಿಳಿಸಿದ್ದಾರೆ.
ಅರಣ್ಯ ಇಲಾಖೆಯಿಂದ ಸಹಾಯವಾಣಿ
ಶನಿವಾರ ಹುಲಿಯು ಕಾಣಿಸಿಕೊಂಡ ಹಿನ್ನೆಲೆ ಬೆಮೆಲ್ ನೌಕರರು ಆತಂಕದಲ್ಲಿ ಇದ್ದಾರೆ. ರೈತರು ಜಾಗ್ರತೆ ವಹಿಸಬೇಕು ಹುಲಿ ಕಂಡು ಬಂದಲ್ಲಿ ಅಥವಾ ಅದರ ಹೆಜ್ಜೆಗಳು ಕಂಡು ಬಂದರೆ ತಕ್ಷಣ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ 1926ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…