Tight security at Chamundi Hill: Deployment of over 1,700 police personnel
ಮೈಸೂರು : ಆಷಾಢಮಾಸದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತಾದಿಗಳು ಬರುವ ಕಾರಣ ಸುರಕ್ಷತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಲಲಿತಾದ್ರಿಪುರ, ಉತ್ತನಹಳ್ಳಿ, ತಾವರೆಕಟ್ಟೆ ಮಾರ್ಗದಿಂದ ಖಾಸಗಿ ವಾಹನಗಳ ಪ್ರವೇಶ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಹೇಳಿದರು.
ಚಾಮುಂಡಿಬೆಟ್ಟದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಷಾಢಮಾಸದ ಶುಕ್ರವಾರ, ಶನಿವಾರ, ಭಾನುವಾರ ಮತ್ತು ವರ್ಧಂತಿ ದಿನಗಳಂದು ಭಕ್ತರು ಹೆಚ್ಚಾಗಿ ಆಗಮಿಸುವ ಕಾರಣ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿರ್ಬಂಧ ಸೇರಿ ಸಣ್ಣ ಲೋಪವಾಗದಂತೆ ರಕ್ಷಣೆ ನೀಡಲಾಗುವುದು ಎಂದು ಹೇಳಿದರು.
ಮುಂಜಾನೆ 3 ರಿಂದ ರಾತ್ರಿ 12 ಗಂಟೆವರೆಗೆ ಬಂದೋಬಸ್ತ್ ಮಾಡಲಾಗಿದ್ದು, ನಾಲ್ವರು ಡಿಸಿಪಿ, 12 ಮಂದಿ ಎಸಿಪಿ, 32 ಸರ್ಕಲ್ ಇನ್‌ಸ್ಪೆಕ್ಟರ್, 65 ಪಿಎಸ್‌ಐ,1071, 6 ಕೆಎಸ್‌ಆರ್‌ಪಿ ತುಕಡಿಗಳು, 12 ಸಿಎಆರ್ ತುಕಡಿಗಳು, 300 ಹೋಂಗಾರ್ಡ್‌ಗಳು ಸೇರಿದಂತೆ 1700ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಯಾವುದೇ ಸ್ಥಳದಿಂದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗೂಗಲ್ ಮ್ಯಾಪ್ ಅಥವಾ ವಾಯ್ಸ್ ಸರ್ಚ್ ಉಪಯೋಗಿಸಿ ಲಲಿತಮಹಲ್ ಪಾರ್ಕಿಂಗ್ ಸ್ಥಳವನ್ನು ಸುಲಭವಾಗಿ ತಲುಪುವ, ವಿವಿಐಪಿ ಹಾಗೂ ಸರ್ಕಾರಿ ವಾಹನಗಳಿಗೆ ವಿಶೇಷ ನಿಲುಗಡೆ ಸ್ಥಳ ಗುರುತಿಸಲಾಗಿದೆ. ಬೆಟ್ಟದ ಮೇಲೆ ದರ್ಶನದ ಟಿಕೆಟ್ ವಿತರಣೆ ಮಾಡುವುದಿಲ್ಲ. ಲಲಿತಮಹಲ್ ಮೈದಾನದಲ್ಲಿ 300 ರೂ. ಮತ್ತು 2000 ರೂ. ದರ್ಶನದ ಟಿಕೆಟ್‌ಗಳ ಕೌಂಟರ್ ತೆರೆಯಲಾಗುವುದು. ಸಾಮಾನ್ಯ ಮತ್ತು ಐರಾವತ ಬಸ್ ಕಲ್ಪಿಸಲಾಗುವುದು ಎಂದು ವಿವರಿಸಿದರು.
ಭಕ್ತರು ತಮ್ಮ ವಾಹನಗಳನ್ನು ಲಲಿತಮಹಲ್ ಪ್ಯಾಲೇಸ್ ಮುಂಭಾಗದ ಮೈದಾನದಲ್ಲಿ ನಿಲುಗಡೆ ಮಾಡಬೇಕು. ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ನಗರ ಬಸ್ ನಿಲ್ದಾಣದಿಂದ ಶುಕ್ರವಾರ ಮಾತ್ರ ಚಾಮುಂಡಿಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಮೆಟ್ಟಿಲು ಮೂಲಕ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮುಂಜಾನೆ 5 ಗಂಟೆಯಿಂದ ಪ್ರವೇಶ ಕಲ್ಪಿಸಲಾಗುವುದು. ಈ ಭಕ್ತಾದಿಗಳು ಪಿಂಜಾರಾಪೋಲ್ ಬಳಿಯ ಮೈದಾನದಲ್ಲಿ ವಾಹನ ನಿಲುಗಡೆ ಮಾಡಬಹುದು. ಬೆಟ್ಟದ ನಿವಾಸಿಗಳು ಮುಕ್ತ ಸಂಚಾರಕ್ಕಾಗಿ ಅಗತ್ಯ ದಾಖಲೆಗಳನ್ನು ಹಾಜರಿಪಡಿಸಿ ಪ್ರವೇಶ ಪಡೆಯಬಹುದಾಗಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…