Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ : ತನ್ವೀರ್ ಸೇಠ್

ಮೈಸೂರು :  ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದ್ದಾರೆ. ರಾಜೀವ್‌ ನಗರ ಅಲ್‌ ಬದರ್‌ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.

ಇನ್ನು ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!