ಮೈಸೂರು : ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್ ಸೇಠ್ ಘೋಷಿಸಿದ್ದಾರೆ. ರಾಜೀವ್ ನಗರ ಅಲ್ ಬದರ್ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.
ಇನ್ನು ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…