ಮೈಸೂರು

ಮೈಸೂರು : ಸೇನೆ ಬೆಂಬಲಿಸಿ ತಿರಂಗಾ ಯಾತ್ರೆ

ಮೈಸೂರು : ರಾಷ್ಟ್ರೀಯ ಭದ್ರತೆಗಾಗಿ ನಾಗರಿಕರು ಘೋಷವಾಕ್ಯದಡಿ ಮೈಸೂರಿನಲ್ಲಿ ಶುಕ್ರವಾರ ನಡೆದ ತಿರಂಗಾ ಯಾತ್ರೆಯಲ್ಲಿ ದೇಶದ ಮೂರು ಸೇನೆಗಳಿಗೆ ಬಹುಪರಾಕ್‌ ಹೇಳುವ ಮೂಲಕ ದೇಶಭಕ್ತಿಯನ್ನು ಅನಾವರಣಗೊಳಿಸಿ, ವೀರ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಆಪರೇಷನ್ ಸಿಂಧೂರ ಯಶಸ್ವಿ ಹಿನ್ನಲೆ ನಗರದಲ್ಲಿ ಬಿಜೆಪಿ ವತಿಯಿಂದ ನಡೆದ ತಿರಂಗಾ ಯಾತ್ರೆಯಲ್ಲಿ ಪಕ್ಷಾತೀತವಾಗಿ ಭಾಗವಹಿಸಿದ ಸಾರ್ವಜನಿಕರು ದೇಶದ ಪರ ಜಯಘೋಷ ಮೊಳಗಿಸಿದರು.

ನಗರದ ಜನರಲ್ ಕಾರ್ಯಪ್ಪ ವೃತ್ತದ ಬಳಿ ಜಮಾಯಿಸಿದ ವಿವಿಧ ಕಾಲೇಜು ವಿದ್ಯಾರ್ಥಿಗಳು, ಬಿಜೆಪಿ ಕಾರ್ಯಕರ್ತರು, ಮೈಸೂರಿನ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು ತಿರಾಂಗವನ್ನಿಡಿದು ಶಿವರಾಂಪೇಟೆ ರಸ್ತೆ, ಕೆ.ಆರ್‌ ವೃತ್ತ, ಡಿ.ದೇವರಾಜು ರಸ್ತೆ ಮುಖೇನ ಮತ್ತೆ ಕಾರ್ಯಪ್ಪ ವೃತ್ತದ ಬಳಿ ಬಂದರು.

ತಿರಂಗ ಯಾತ್ರೆಯಲ್ಲಿ ಜೆಎಸ್ಎಸ್ ದೇಶೀಕೇಂದ್ರ ಸ್ವಾಮೀಜಿ, ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಬಿಜಿಎಸ್ ಸೋಮನಾಥೇಶ್ವರ ಸ್ವಾಮೀಜಿ ಮತ್ತು ವಿವಿಧ ಧರ್ಮದ ಧಾರ್ಮಿಕ ಗುರುಗಳು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

13 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

27 mins ago

ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…

49 mins ago

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಐಟಿ ದಾಳಿ

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…

1 hour ago

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…

2 hours ago

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…

2 hours ago