ಎಚ್.ಡಿ.ಕೋಟೆ: ಇಂದು ಭೀಮನ ಅಮಾವಾಸ್ಯೆ ಪ್ರಯುಕ್ತ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜನ ಸಾಗರವೇ ಹರಿದುಬಂದಿದೆ.
ಭೀಮನ ಅಮಾವಾಸ್ಯೆ ಪ್ರಯುಕ್ತ ದೇವಾಲಯವನ್ನು ತಳಿರು ತೋರಣ ಹಾಗೂ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಇಂದು ಮಹದೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಬೆಳಿಗ್ಗೆಯೇ ಹಲವು ಅಭಿಷೇಕಗಳನ್ನು ನೆರವೇರಿಸಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇಂದು ಬೆಳಿಗ್ಗೆಯಿಂದಲೇ ಸಾವಿರಾರು ಮಂದಿ ದೇಗುಲಕ್ಕೆ ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇನ್ನೂ ದೇವಾಲಯಕ್ಕೆ ಬರುವವರಿಗೆ ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಕಬಿನಿ ಹಿನ್ನೀರಿನಲ್ಲಿರುವ ಈ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಪ್ರತೀ ಅಮಾವಾಸ್ಯೆ ದಿನಗಳಂದು ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಕಬಿನಿ ಜಲಾಶಯ ಭರ್ತಿಯಾಗಿರುವುದರಿಂದ ಈ ದೇವಾಲಯವನ್ನು ನೋಡೋದೆ ಒಂದು ಚೆಂದ. ಸುತ್ತಲೂ ನೀರಿದ್ದು, ಒಂದು ಬದಿಯಲ್ಲಿ ಮಾತ್ರ ಈ ದೇವಾಲಯವಿದೆ. ಹೀಗಾಗಿ ದೇಗುಲಕ್ಕೆ ಬರುವ ಸಾರ್ವಜನಿಕರು ಕಬಿನಿ ಹಿನ್ನೀರಿನಲ್ಲಿ ಮೋಜು ಮಸ್ತಿ ಮಾಡೋದೂ ಸರ್ವೆ ಸಾಮಾನ್ಯವಾಗಿದೆ.
ಗೋವಾ: ಇಲ್ಲಿ ನಡೆದ 57ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ನಟ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದಿದ್ದಾರೆ.…
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಮಹಿಳೆಯರಿಗೆ…
ನವದೆಹಲಿ: ಮೊಬೈಲ್ ಕಳೆದುಹೋದರೆ ಏನು ಮಾಡಬೇಕು? 140ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಸಂಚಾರ್ ಸಾಥಿ’ ಬಳಸುವಂತೆ…
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿಗೆ ತೆರೆ ಬಿದ್ದಿದೆ. ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಲು ರಾಜ್ಯ…
ಕರ್ನಾಟಕ ವಿಧಾನಸಭೆಯ ಅತ್ಯಂತ ಕಿರಿಯ ಶಾಸಕ, ನಂಜನಗೂಡು ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುವ ದರ್ಶನ್ ಧ್ರುವನಾರಾಯಣರ ಸರಳ ‘ಮಂತ್ರ ಮಾಂಗಲ್ಯ’ ಮದುವೆ…
ಮೈಸೂರಿನಲ್ಲಿ ಸುಮಾರು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘನೆಯಾದ ಕಟ್ಟಡಗಳು ಪೂರ್ಣಗೊಂಡಿದ್ದರೂ ಸಿ.ಆರ್. (ಕಟ್ಟಡ ಪ್ರಮಾಣ ಪತ್ರ )…