ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ.
ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ.
ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದ್ದು, ಫೆಬ್ರವರಿ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ.
ಅಂದು ಬೆಳಿಗ್ಗೆ 9ರಿಂದ 9.30ರೊಳಗೆ ಸಲ್ಲುವ ಶುಭ ಮೀನ ಲಗ್ನ ಹಾಗೂ ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಪಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಇನ್ನು ಕುಂಭಮೇಳಕ್ಕಾಗಿಯೇ ಸರ್ಕಾರ ಆರು ಕೋಟಿ ಬಿಡುಗಡೆ ಮಾಡಿದೆ.



