ಮೈಸೂರು

ದುಷ್ಕರ್ಮಿಗಳಿಂದ ಟೊಮ್ಯಾಟೋ ಬೆಳೆ ನಾಶ: ಕಂಗಾಲಾದ ಅನ್ನದಾತ

ಮೈಸೂರು: ರಾತ್ರೋರಾತ್ರಿ ದುಷ್ಕರ್ಮಿಗಳು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಶ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಬಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಾದೇಗೌಡ ಎಂಬುವವರು ಅರ್ಧ ಎಕರೆ ಜಮೀನಿನಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಟಿ ಮಾಡಿದ್ದರು.

ಇದಕ್ಕಾಗಿಯೇ ಸುಮಾರು 2 ಲಕ್ಷ ಹಣವನ್ನು ಸಹ ಖರ್ಚು ಮಾಡಿದ್ದರು. ಟೊಮ್ಯಾಟೋ ಬೆಳೆ ಕಟಾವಿಗೆ ಬಂದಿದ್ದ ವೇಳೆ ರಾತ್ರೋರಾತ್ರಿ ಕಿಡಿಗೇಡಿಗಳು ಗಿಡಗಳನ್ನು ಕಿತ್ತು ನಾಶಮಾಡಿದ್ದಾರೆ.

ಬೆಳಿಗ್ಗೆ ಜಮೀನಿಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ರೈತ ಮಾದೇಗೌಡ ತೀವ್ರ ಕಂಗಾಲಾಗಿದ್ದಾರೆ. ಘಟನೆ ಸಂಬಂಧ ಜಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

21 mins ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

32 mins ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

37 mins ago

ಓದುಗರ ಪತ್ರ | ನೀರು ಪೋಲು ಮಾಡದಂತೆ ಜಾಗೃತಿ ಮೂಡಿಸಿ

ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…

43 mins ago

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…

48 mins ago

ಅಪಘಾತದಿಂದ ಹೊತ್ತಿ ಉರಿದ ಟಿಪ್ಪರ್‌, ಬಸ್‌ : 14 ಮಂದಿ ಸಜೀವ ದಹನ

ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…

57 mins ago