Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ನಾಳೆ ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ಚಿಕ್ಕದೇವಮ್ಮ ಬೆಟ್ಟದಲ್ಲಿ ಸಕಲ ಸಿದ್ಧತೆ

ಸರಗೂರು: ನಾಳೆ ಮೂರನೇ ಆಷಾಢ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಾಳೆ ಮೂರನೇ ಆಷಾಢ ಶುಕ್ರವಾಗಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇಂದೇ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗುತ್ತಿದೆ.

ನಾಳೆ ದೇವಾಲಯಕ್ಕೆ ಆಷಾಢ ಶುಕ್ರವಾರದ ಪ್ರಯುಕ್ತ ನೂರಾರು ಮಂದಿ ಬರುವ ನಿರೀಕ್ಷೆಯಿದ್ದು, ದೇವಿಯ ದರ್ಶನ ಮಾಡಲು ಎಲ್ಲಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಇನ್ನು ನಾಳೆ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಖಾಸಗಿ ವಾಹನಗಳು ಹೆಚ್ಚು ಹೆಚ್ಚು ಸಂಚರಿಸಲಿದ್ದು, ಸಾರ್ವಜನಿಕರು ಕೂಡ ಹೆಚ್ಚಾಗಿ ಸೇರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.

ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಸಹೋದರಿಯಾದ ಚಿಕ್ಕದೇವಮ್ಮನಿಗೆ, ಚಾಮುಂಡಿಬೆಟ್ಟದಲ್ಲಿ ಹೇಗೆಲ್ಲಾ ಪೂಜೆ ನಡೆಯುತ್ತೆ ಹಾಗೆಯೇ ಚಿಕ್ಕದೇವಮ್ಮನ ಬೆಟ್ಟದಲ್ಲೂ ಕೂಡ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ.

ಇನ್ನೂ ಇತಿಹಾಸದ ಪುರಾವೆಗಳ ಪ್ರಕಾರ ಚಿಕ್ಕದೇವಮ್ಮನ ಬೆಟ್ಟಕ್ಕೂ ಮೈಸೂರಿನ ಚಾಮುಂಡಿಬೆಟ್ಟಕ್ಕೂ ಸುರಂಗ ಮಾರ್ಗ ಇದೆ ಎನ್ನಲಾಗುತ್ತಿದ್ದು, ಸಂಶೋಧನೆ ನಡೆಸಿದ ಬಳಿಕವೇ ಇದರ ಸತ್ಯಾಸತ್ಯತೆ ಹೊರಬರಲಿದೆ.

 

 

 

 

 

Tags: