ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿ ವೈಭವ ಅದಕ್ಕೆ ಮತ್ತಷ್ಟು ಮೆರಗು ತುಂಬಿದೆ.
ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ನಡೆಯುತ್ತಿದ್ದು, ರಾಜ್ಯದ ಶ್ರೀಮಂತ ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂದಿಸಲಾಗುತ್ತಿದೆ. ಐತಿಹಾಸಿಕ ಜಂಜೂ ಸವಾರಿಗೆ ಅಂತಿಮ ಹಂತದ ಸಿದ್ದತಾ ಕಾರ್ಯಗಳು ನಡೆಯುತ್ತಿದೆ. 750ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನಾಳದ ಅಧಿದೇವತೆ ಚಾಮುಂಡೇಶ್ವರಿ ದೇವಿ ವಿಗ್ರಹ ಹೊತ್ತ ನೇತೃತ್ವದ ಗಜಪಡೆ ಸಾಗಲಿದೆ.
ಅಂಬಾ ವಿಲಾಸ ಅರಮನೆ ಆವರಣದ ಬಲರಾಮ ದ್ವಾರದ ಮೇಲೆ ಮಧ್ಯಾಹ್ನ 1-41ರಿಂದ 2-10ರೊಳಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವರು. ಬಳಿಕ ವಿಜಯ ದಶಮಿ ಮೆರವಣಿಗೆ ಆರಂಭವಾಗಲಿದೆ.
ವಿವಿಧ ಜಿಲ್ಲೆಗಳ ಕಲಾವಿದರು, ಸಾಂಸ್ಕೃತಿಕ ತಂಡಗಳು ಪ್ರದರ್ಶನದೊಂದಿಗೆ ಬನ್ನಿಮಂಟಪದವರಗೂ ಸು.5 ಕಿ.ಲೋ ವರೆಗೂ ಮೆರವಣಿಗೆ ಸಾಗಲಿದೆ. ವಿವಿಧ ಯೋಜನೆಗಳು ಕಾರ್ಯಕ್ರಮಗಳು ಮತ್ತು ಸಾಮಾಜಿಕಕ ಸಂದೇಶ ಬಿಂಬಿಸುವ ವಿವಿಧ ಸರ್ಕಾರಿ ಇಲಾಕೆಗಳ ಸ್ತಬ್ಧಚಿತ್ರಗಳು ಮೆರವಣಿಗೆಯ ಭಾಗವಾಗಲಿದೆ. ದಾರಿಯುದ್ದಕ್ಕೂ ಸಹಸ್ರಾರು ಜನರು ವೈಭವದ ಜಂಬೂ ಸವಾರಿಯನ್ನು ವೀಕ್ಷಿಸಲಿದ್ದಾರೆ.
ಪಂಜಿನ ಕವಾಯತು: ಬನ್ನಿಪಂಟಪದಲ್ಲಿ ಶನಿವಾರ ರಾತ್ರಿ 8ಗಂಟೆಗೆ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…