Mysore
27
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಾಳೆ ಚಿಕ್ಕಜಾತ್ರೆಯ ಸಂಭ್ರಮ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಾಳೆ ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಲಿದೆ.

ನಾಳೆ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾವಿರಾರು ಮಂದಿ ಸಾರ್ವಜನಿಕರ ಹರ್ಘೋದ್ಘಾರದ ನಡುವೆ ಚಿಕ್ಕಜಾತ್ರೆ ನಡೆಯಲಿದೆ.

ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದ್ದು, ಇದಕ್ಕಾಗಿ ನಂಜನಗೂಡಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಮುಂಜಾನೆಯಿಂದಲೇ ಚಿನ್ನಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ಶ್ರೀಕಂಠೇಶ್ವರ ಸ್ವಾಮಿ ಸೇರಿದಂತೆ ಪಾರ್ವತಿ ಅಮ್ಮನವರು ಹಾಗೂ ಗಣೇಶ ಮತ್ತು ಚಂಡಿಕೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರಗೆ ತಂದು ಹೊರಗಿನ ಪ್ರಾಂಗಣದಲ್ಲಿರಿಸಿ ಪೂಜೆ ಸಲ್ಲಿಸಲಾಗುತ್ತದೆ.

ಬಳಿಕ ದೇವಾಲಯದ ಸುತ್ತ ಉತ್ಸವ ಮೂರ್ತಿಗಳನ್ನು ಮೆರವಣಿಗೆ ಮಾಡಲಾಗುತ್ತದೆ.

ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಲಿದ್ದು, ರಥಗಳಿಗೆ ಹಣ್ಣು ಜವನ ಎಸೆದು ತಮ್ಮ ಹರಕೆ ತೀರಿಸಲಿದ್ದಾರೆ.

 

 

Tags:
error: Content is protected !!