Mysore
26
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಾಳೆ ದಕ್ಷಿಣಕಾಶಿ ನಂಜನಗೂಡಿನಲ್ಲಿ ವಿಜೃಂಭಣೆಯ ಪಂಚ ಮಹಾರಥೋತ್ಸವ

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿವೆ.

ನಾಳೆ ಬೆಳಿಗ್ಗೆ 5ರಿಂದ 5.45ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಪಂಚ ಮಹಾರಥೋತ್ಸವ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇನ್ನು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದ್ದು, ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ರಥೋತ್ಸವಕ್ಕೆ ಬರುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

 

Tags:
error: Content is protected !!